ಚೀಟಿ ಹಣದ ವಿಚಾರಕ್ಕೆ ಗಲಾಟೆ: ಯುವಕನ ಬರ್ಬರವಾಗಿ ಹತ್ಯೆ
ಚಿಕ್ಕಮಗಳೂರು: ಚೀಟಿ ಹಣದ ವಿಚಾರಕ್ಕೆ ಗಲಾಟೆಯಾಗಿ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಅಮೃತಾಪುರ ಗ್ರಾಮದಲ್ಲಿ ನಡೆದಿದೆ.
ಸಂಜುನಾಯ್ಕ (27) ಕೊಲೆಯಾದ ಯುವಕ. ರುದ್ರೇಶ್ ನಾಯ್ಕ (30) ಹತ್ಯೆಗೈದ ಆರೋಪಿಯಾಗಿದ್ದಾನೆ. ಅಮೃತಾಪುರ ಗ್ರಾಮದ ಸೇವಾಲಾಲ್ ಸಂಘದ ಚೀಟಿ ವ್ಯವಹಾರದಲ್ಲಿ ಇಬ್ಬರ ನಡುವೆ ಗಲಾಟೆಯಾಗಿದೆ. ಗಲಾಟೆ ವೇಳೆ ರುದ್ರೇಶ್, ಸಂಜುನಾಯ್ಕನ ತಲೆ ಮೇಲೆ ದೊಣ್ಣೆಯಿಂದ ಹಲ್ಲೆ ಮಾಡಿದ್ದಾನೆ. ಪರಿಣಾಮ ಗಂಭೀರ ಗಾಯಗೊಂಡು ಸಾವಿಗೀಡಾಗಿದ್ದಾನೆ.





