ಕಾರಿಗೆ ಕ್ಯಾಂಟರ್ ಢಿಕ್ಕಿ: ಸಾಫ್ಟ್‌ವೇರ್ ಇಂಜಿನಿಯರ್ ಮೃತ್ಯು
ಮಂಡ್ಯ: ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಗೆಜ್ಜಲಗೆರೆ ಬಳಿ ಭಾನುವಾರ ಚಲಿಸುತ್ತಿದ್ದ ಕಾರು ಮುಂದೆ ಸಾಗುತ್ತಿದ್ದ ಕ್ಯಾಂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮಹಿಳೆ ಮೃತಪಟ್ಟಿದ್ದಾರೆ.
ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ನಿವಾಸಿ ಸಾಫ್ಟ್‌ವೇರ್ ಎಂಜಿನಿಯರ್ ಅಶ್ವಿನಿ (33) ಮೃತಪಟ್ಟವರು.
ಆಕೆಯ ಪತಿ ಸಾಫ್ಟ್‌ವೇರ್ ಎಂಜಿನಿಯರ್ ಶ್ರೀಕಾಂತ್ (37) ಮತ್ತು 2 ವರ್ಷದ ಮಗುವಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಪ್ರವಾಸ ಮುಗಿಸಿಕೊಂಡು ಮೈಸೂರಿನಿಂದ ಬೆಂಗಳೂರು ಕಡೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ.





