ಉಜಿರೆ: ಮಾಚಾರು ಯವಕರ ವಿರುದ್ಧ ನಡೆದ ಮಾರಣಾಂತಿಕ ಹಲ್ಲೆ ಪ್ರಕರಣ: ಮೂವರು ಆರೋಪಿಗಳಿಗೆ ಹೈಕೋರ್ಟ್‌ನಿಂದ ಜಾಮೀನು
ಬೆಳ್ತಂಗಡಿ: ಉಜಿರೆ ಗ್ರಾಮದ ಮಾಚಾರು ಎಂಬಲ್ಲಿ ಹಣದ ವಿಚಾರದಲ್ಲಿ ಯವಕರ ವಿರುದ್ಧ ನಡೆದ ಮಾರಣಾಂತಿಕ ಹಲ್ಲೆ ಪ್ರಕರಣದ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿದೆ.
ಘಟನೆ ಆಧರಿಸಿ ಬೆಳ್ತಂಗಡಿ ಪೊಲೀಸರು ಮೂವರು ಆರೋಪಿಗಳ ವಿರುದ್ದ ಕೊಲೆಯತ್ನ ಪ್ರಕರಣ ದಾಖಲಿಸಿದ್ದರು.
ಇದೀಗ ಮೊದಲ ಆರೋಪಿ, ನ್ಯಾಯಾಂಗ ಬಂಧನದಲ್ಲಿರುವ ಹಮೀದ್ ಎಂಬವರಿಗೆ ಜಾಮೀನು ಮತ್ತು ಎರಡನೇ ಆರೋಪಿ ರಿಯಾಝ್ ಮತ್ತು ಮೂರನೇ ಆರೋಪಿ ಅರ್ಷಾದ್ ಅವರಿಗೆ ನಿರೀಕ್ಷಣ ಜಾಮೀನು ಮಂಜೂರು ಮಾಡಿದೆ.





