March 13, 2026

ಕಾಶ್ಮೀರದ ಪಹಲ್ಗಾಮ್‌ನಲ್ಲಿ  ಭಯೋತ್ಪಾದಕರು ಗುಂಡಿನ ದಾಳಿ: ಉಗ್ರನಿಂದ ರೈಫಲ್‌ ಕಸಿದುಕೊಳ್ಳುವಾಗ ಗುಂಡೇಟಿಗೆ ಸ್ಥಳೀಯ ಕುದುರೆ ರೈಡರ್‌ ಬಲಿ

0
image_editor_output_image58564907-1745394926901.jpg

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ಗುಂಡಿನ ದಾಳಿಯಲ್ಲಿ ಸ್ಥಳೀಯ ಕುದುರೆ ರೈಡರ್‌ ಒಬ್ಬರು ಬಲಿಯಾಗಿದ್ದಾರೆ.

ಸೈಯದ್ ಆದಿಲ್ ಹುಸೇನ್ ಶಾ ಮೃತಪಟ್ಟ ವ್ಯಕ್ತಿ. ಪ್ರವಾಸಿಗರ ಮೇಲೆ ದಾಳಿ ನಡೆಸುತ್ತಿದ್ದಾ ಸೈಯದ್‌ ಧೈರ್ಯ ಮಾಡಿ ಓರ್ವನ ಉಗ್ರನಿಂದ ರೈಫಲ್‌ ಕಸಿದುಕೊಳ್ಳಲು ಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ಸೈಯದ್‌ ಮೇಲೆ ಗುಂಡು ಹಾರಿಸಿದ್ದಾರೆ.

ಸೈಯದ್‌ ಆದಿಲ್‌ ಪಹಲ್ಗಾಮ್‌ ಕಾರು ಪಾರ್ಕಿಂಗ್ ಸ್ಥಳದಿಂದ ಕುದುರೆಯ ಮೇಲೆ ಪ್ರವಾಸಿಗರನ್ನು ಬೈಸರನ್‌ಗೆ ಕರೆದುಕೊಂಡು ಬರುವ ಕೆಲಸ ಮಾಡುತ್ತಿದ್ದರು. ನರಮೇಧದಲ್ಲಿ ಸೈಯದ್‌ ಜೊತೆ 25 ಪುರುಷ ಪ್ರವಾಸಿಗರನ್ನು ಉಗ್ರರು ಹತ್ಯೆ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!