December 16, 2025

ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ದಾಳಿ ಪ್ರಕರಣ: ಮೂವರು ಶಂಕಿತ ಉಗ್ರರ ರೇಖಾಚಿತ್ರ ಬಿಡುಗಡೆ ಮಾಡಿದ ಭದ್ರತಾ ಸಂಸ್ಥೆ

0
image_editor_output_image1261696321-1745395282645.jpg

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಬುಧವಾರ ನಡೆದ ಭಯೋತ್ಪಾದಕರ ದಾಳಿಯಲ್ಲಿ 26 ಪ್ರವಾಸಿಗರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದರು. ಇದೀಗ ಘಟನೆಯಲ್ಲಿ ಭಾಗಿಯಾದ ಮೂವರು ಶಂಕಿತ ಉಗ್ರರ ರೇಖಾಚಿತ್ರವನ್ನು ಭದ್ರತಾ ಸಂಸ್ಥೆ ಬಿಡುಗಡೆ ಮಾಡಿದೆ.

ಭದ್ರತಾ ಸಂಸ್ಥೆಗಳು ಭಯೋತ್ಪಾದಕರನ್ನು ಪತ್ತೆಹಚ್ಚಲು ಮತ್ತು ಈ ಭಯಾನಕ ದಾಳಿಯ ಹಿಂದಿನ ಕ್ರೂರ ಯೋಜನೆಯನ್ನು ಬಯಲು ಮಾಡಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿವೆ. ಇದೀಗ ಪ್ರತ್ಯಕ್ಷದರ್ಶಿಗಳ ಮಾಹಿತಿಯ ಆಧಾರದ ಮೇಲೆ ಶಂಕಿತ ಭಯೋತ್ಪಾದಕರ ರೇಖಾಚಿತ್ರವನ್ನು ಬಿಡಿಸಲಾಗಿದೆ.

ದಾಳಿಗೆ ಮುನ್ನ ದಟ್ಟವಾದ ಅರಣ್ಯ ಪ್ರದೇಶದಲ್ಲಿ ಭಯೋತ್ಪಾದಕರು ಅಡಗುತಾಣಗಳನ್ನು ನಿರ್ಮಿಸಿದ್ದರು. ಭಯೋತ್ಪಾದಕರು ಬಾಡಿ ಕ್ಯಾಮೆರಾಗಳನ್ನು ಧರಿಸಿದ್ದರು. ವಿಶೇಷವಾಗಿ ಹೆಲ್ಮೆಟ್ ಅಳವಡಿಸಿದ ಕ್ಯಾಮೆರಾಗಳನ್ನು ಧರಿಸಿ ಕೃತ್ಯವನ್ನು ಸಂಪೂರ್ಣವಾಗಿ ಚಿತ್ರೀಕರಿಸಿದ ವಿಚಾರ ತನಿಖೆಯಲ್ಲಿ ಗೊತ್ತಾಗಿದೆ.

Leave a Reply

Your email address will not be published. Required fields are marked *

error: Content is protected !!