ಮಣಿಪಾಲ: ರಸ್ತೆ ಬದಿಯ ಕಂದಕಕ್ಕೆ ಉರುಳಿ ಬಿದ್ದ ಸ್ಕೂಟರ್: ಪರ್ಕಳದ ನಿವಾಸಿ ಮೃತ್ಯು
ಮಣಿಪಾಲ : ಚಾಲಕನ ನಿಯಂತ್ರಣ ತಪ್ಪಿ ಸ್ಕೂಟರ್ ರಸ್ತೆ ಬದಿಯ ಕಂದಕಕ್ಕೆ ಉರುಳಿ ಬಿದಿದೆ.
ಗಂಭೀರ ಗಾಯಗೊಂಡಿದ್ದ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಿನ್ನೆ (ಏ.22) ಮಧ್ಯಾಹ್ನ ಮಣಿಪಾಲದ ದಶರಥ ನಗರ ಬಾಲಿಗಬೆಟ್ಟು ಪಂಚಾಯತ್ ಮುಖ್ಯ ರಸ್ತೆಯಲ್ಲಿ ನಡೆದಿದೆ.
ಪರ್ಕಳದ ದೇವಿ ನಗರ ನಿವಾಸಿ ಅಬೂಬಕರ್ ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.
ಕೆಲಸದ ನಿಮಿತ್ತ ಅಬೂಬಕರ್ ಸ್ಕೂಟರ್‌ನಲ್ಲಿ ತೆರಳುತ್ತಿದ್ದಾಗ ನಿಯಂತ್ರಣ ತಪ್ಪಿ ಪಕ್ಕದ ಕಂದಕಕ್ಕೆ ಉರುಳಿ ಬಿದ್ದು ಗಂಭೀರ ಗಾಯ ಗೊಂಡು ಸ್ಥಳದಲ್ಲೇ ಮೃತಪಟ್ಟಿರುತ್ತಾರೆ. ಈ ಘಟನೆ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





