December 15, 2025

ಪಹಲ್ಗಾಮ್ ನಡೆದ ಭಯೋತ್ಪಾದಕ ದಾಳಿ ಖಂಡಿಸಿ ಮತ್ತು ಕೇಂದ್ರ ಸರಕಾರದ ಭದ್ರತೆ, ಗುಪ್ತಚರ ವೈಫಲ್ಯತೆ ವಿರುದ್ಧ ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿಯಲ್ಲಿ ಕ್ಯಾಂಡಲ್ ಮಾರ್ಚ್ ಪ್ರತಿಭಟನೆ

0
IMG-20250423-WA0012.jpg

ಬೆಳ್ತಂಗಡಿ: ಜಮ್ಮು ಕಾಶ್ಮೀರದ ಪಹಲ್ಗಾಮ್ ಮಂಗಳವಾರ ನಡೆದ ಭಯೋತ್ಪಾದಕ ದಾಳಿಯನ್ನು ಮತ್ತು ಕೇಂದ್ರ ಸರಕಾರದ ಭದ್ರತೆ, ಗುಪ್ತಚರ ವೈಫಲ್ಯತೆ ಖಂಡಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಕ್ಯಾಂಡಲ್ ಮಾರ್ಚ್ ಪ್ರತಿಭಟನೆ ಬೆಳ್ತಂಗಡಿ ಮೂರು ಮಾರ್ಗದ ಬಳಿ ನಡೆಯಿತು.ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ನವಾಝ್ ಕಟ್ಟೆ ಕಾಶ್ಮೀರದ ಪಹಲ್ಗಾಮ್ ನಡೆದಿರುವ ಉಗ್ರರ ದಾಳಿ ಪೂರ್ವಯೋಜಿತ ಸಂಚು. ಪ್ರಾಣಹತ್ಯೆ ಮಾಡಿರುವ ಈ ಘಟನೆ ಅತ್ಯಂತ ಖಂಡನೀಯ. ಘಟನೆಯಲ್ಲಿ ಸುಮಾರು 28 ಜನ ಮೃತಪಟ್ಟಿರುವ ಭೀಕರವಾದ ಉಗ್ರರ ದಾಳಿ ನಡೆಯುವ ಮಾಹಿತಿ ಮೊದಲೇ ತಿಳಿಯದಿರುವುದು ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವಾಗಿದೆ. ಈ ಹಿಂದೆ ನಡೆದ ಪುಲ್ವಾಮಾ ಘಟನೆಯಲ್ಲಿ ಗುಪ್ತಚರ ಮಾಹಿತಿಯ ವೈಫಲ್ಯವಿದೆ ಎಂದರು. ದೇಶದ ಜನರಿಗೆ ಕೇಂದ್ರ ಭದ್ರತೆ ಒದಗಿಸಬೇಕು, ಮೃತರ ಕುಟುಂಬಗಳಿಗೆ ಪರಿಹಾರ ನೀಡಬೇಕು. ಪೆಹಲ್ಗಾಮಿನ ಉಗ್ರರ ದಾಳಿ ಪ್ರಕರಣದಲ್ಲಿ ಕೇಂದ್ರ ಗುಪ್ತಚರ ಇಲಾಖೆ ವಿಫಲವಾಗಿದೆ. ಭಯೋತ್ಪಾದಕರನ್ನು ನಿರ್ಮೂಲನೆಗೊಳಿಸುವ ಜೊತೆಗೆ ದೇಶದ ಜನರಿಗೆ ಭದ್ರತೆ ನೀಡುವ ಕಾರ್ಯವನ್ನು ಕೇಂದ್ರ ಸಮರ್ಥವಾಗಿ ನಿರ್ವಹಿಸಬೇಕು ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರಾಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ, ಉಪಾಧ್ಯಕ್ಷರಾದ ನಿಸಾರ್ ಕುದ್ರಡ್ಕ, ಜೊತೆ ಕಾರ್ಯದರ್ಶಿ ರಶೀದ್ ಬೆಳ್ತಂಗಡಿ, ಸಮಿತಿ ಸದಸ್ಯರಾದ ಮುಸ್ತಾಫ ಜಿ. ಕೆರೆ, ಸಹಲ್ ನಿರ್ಸಾಲ್, ಅಶ್ರಫ್ ಬದ್ಯಾರು, ಪಕ್ಷದ ಪದಾಧಿಕಾರಿಗಳು, ನಾಯಕರು, ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!