March 22, 2026

ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ:
ರಾಜೇಶ್ ಭಟ್ ಗೆ ನಾಲ್ಕು ದಿನ ಪೊಲೀಸ್ ಕಸ್ಟಡಿಗೆ

0
Screenshot_20211220-165450_Chrome.jpg

ಮಂಗಳೂರು: ಇಂಟರ್ನ್‌ಶಿಪ್‌ಗೆ ಬಂದಿದ್ದ ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಶರಣಾಗಿದ್ದ ಆರೋಪಿ, ವಕೀಲ ಕೆ.ಎಸ್.ಎನ್.ರಾಜೇಶ್‌ ನನ್ನು ಜೆಎಂಎಫ್‌ಸಿ ಕೋರ್ಟ್ ಮಂಗಳವಾರ ನಾಲ್ಕು ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

ಪೊಲೀಸರು ಏಳು ದಿನಗಳ ಕಾಲ ಆರೋಪಿಯನ್ನು ಕಸ್ಟಡಿಗೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶೆ ಅಶ್ವಿನಿ ಕೋರೆ, ನಾಲ್ಕು ದಿನಗಳ ಕಾಲ ಕಸ್ಟಡಿಗೆ ಒಪ್ಪಿಸಿ ಆದೇಶಿಸಿದ್ದಾರೆ. ಎರಡು ತಿಂಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ರಾಜೇಶ್ ಸೋಮವಾರ ನ್ಯಾಯಾಲಯಕ್ಕೆ ಶರಣಾಗಿದ್ದು, ಆತನಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.

Leave a Reply

Your email address will not be published. Required fields are marked *

error: Content is protected !!