ಇಸ್ರೋದ ಮಾಜಿ ಅಧ್ಯಕ್ಷ ಕೆ. ಕಸ್ತೂರಿರಂಗನ್ ನಿಧನ
ಬೆಂಗಳೂರು: ಇಸ್ರೋದ ಮಾಜಿ ಅಧ್ಯಕ್ಷ ಮತ್ತು ಮಹತ್ವಾಕಾಂಕ್ಷೆಯ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ)ಯ ಕರಡು ಸಮಿತಿಯ ಅಧ್ಯಕ್ಷರಾಗಿದ್ದ ಕೆ ಕಸ್ತೂರಿರಂಗನ್ ಶುಕ್ರವಾರ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅವರಿಗೆ 84 ವರ್ಷ ವಯಸ್ಸಾಗಿತ್ತು. ‘ಕಸ್ತೂರಿರಂಗನ್ ಅವರು ಇಂದು ಬೆಳಿಗ್ಗೆ ಬೆಂಗಳೂರಿನಲ್ಲಿರುವ ತಮ್ಮ ನಿವಾಸದಲ್ಲಿ ವಿಧಿವಶರಾಗಿದ್ದಾರೆ. ಏಪ್ರಿಲ್ 27ರಂದು ರಾಮನ್ ಸಂಶೋಧನಾ ಸಂಸ್ಥೆಯಲ್ಲಿ (RRI) ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.





