ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ ಹಿನ್ನೆಲೆ: ಪಾಕಿಸ್ತಾನಿ ನಟ ಫವಾದ್ ಖಾನ್ ನಟನೆಯ ‘ಅಬೀರ್ ಗುಲಾಲ್’ ಚಿತ್ರದ ಹಾಡು ಯೂಟ್ಯೂಬ್‌ನಿಂದ ಡಿಲೀಟ್
ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ ಹಿನ್ನೆಲೆ ಪಾಕಿಸ್ತಾನಿ ನಟ ಫವಾದ್ ಖಾನ್ ನಟನೆಯ ‘ಅಬೀರ್ ಗುಲಾಲ್’ ಚಿತ್ರ ಬಿಡುಗಡೆಗೆ ಅನುಮತಿ ನೀಡಬಾರದು ಎಂದು ತೀವ್ರ ವಿರೋಧ ವ್ಯಕ್ತವಾಗಿರುವ ಬೆನ್ನಲ್ಲೇ ಈ ಚಿತ್ರದ ಹಾಡುಗಳನ್ನು ಯೂಟ್ಯೂಬ್‌ನಿಂದ ಡಿಲೀಟ್ ಮಾಡಲಾಗಿದೆ.
ಪಾಕ್ ನಟ ಫವಾದ್ ನಟನೆಯ ‘ಅಬೀರ್ ಗುಲಾಲ್’ ಚಿತ್ರದ 2 ಹಾಡುಗಳು ‘ಸರಿಗಮ’ ಯೂಟ್ಯೂಬ್ ಚಾನೆಲ್‌ನಲ್ಲಿ ರಿಲೀಸ್ ಮಾಡಲಾಗಿತ್ತು. ಒಂದು ರೊಮ್ಯಾಂಟಿಕ್ ಸಾಂಗ್ ಮತ್ತೊಂದು ಪಾರ್ಟಿ ಸಾಂಗ್ ಆಗಿತ್ತು. ಈಗ ಈ ಎರಡು ಹಾಡನ್ನು ‘ಸರಿಗಮ’ ಯೂಟ್ಯೂಬ್ ಚಾನೆಲ್‌ನಿಂದ ತೆಗೆದು ಹಾಕಲಾಗಿದೆ.





