March 13, 2026

ತಲೆಗೆ ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ

0
image_editor_output_image-748110731-1745573099851.jpg

ವಿಜಯಪುರ: ತಲೆಗೆ ಗುಂಡು ಹಾರಿಸಿಕೊಂಡು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡು ಘಟನೆ ನಗರದ ಶಿಕಾರಿ ಖಾನ ಪ್ರದೇಶದಲ್ಲಿ ಶುಕ್ರವಾರ ನಡೆದಿದೆ.

ಅಶನಾಮ್ ಮಿರ್ಜಿ (22) ಸಾವಿಗೆ ಶರಣಾದ ಯುವಕ. ಆತ್ಮಹತ್ಯೆ ಮಾಡಿಕೊಂಡ ಅಶನಾಮ್, ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಪ್ರಕಾಶ್ ಮಿರ್ಜಿ ಅವರ ಮಗನಾಗಿದ್ದು, ತಂದೆಯ ಹೆಸರಿನಲ್ಲಿದ್ದ ಪರವಾನಿಗೆ ಹೊಂದಿದ ಪಿಸ್ತೂಲ್‌ನಿಂದ ಮನೆಯ ಬೆಡ್ ರೂಂನಲ್ಲಿ ತಲೆಗೆ ಗುಂಡು ಹಾರಿಸಿಕೊಂಡಿದ್ದಾನೆ.

ಈ ವೇಳೆ, ಮನೆಯಲ್ಲೇ ಇದ್ದ ತಂದೆ, ತಾಯಿ ಹಾಗೂ ಕುಟುಂಬಸ್ಥರು ಗುಂಡಿನ ಶಬ್ದ ಕೇಳುತ್ತಲೇ ಕೊಠಡಿಯ ಬಾಗಿಲು ತೆರೆದು ನೋಡಿದ್ದಾರೆ. ತಕ್ಷಣವೇ ಬಿಎಲ್‌ಡಿಇ ಆಸ್ಪತ್ರೆಗೆ ಮಗನನ್ನು ಸಾಗಿಸಿದ್ದಾರೆ. ಆದರೆ, ಅಷ್ಟರಲ್ಲೇ ಮೃತಪಟ್ಟಿದ್ದಾಗಿ ವೈದ್ಯರು ಘೋಷಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!