ಮಡಿಕೇರಿ: ಕಾಡಾನೆ ದಾಳಿಯಿಂದ ರೈತ ಸಾವು
ಮಡಿಕೇರಿ: ಕಾಡಾನೆ ದಾಳಿಯಿಂದ ರೈತರೊಬ್ಬರು ಮೃತಪಟ್ಟಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅವರೆಗುಂದದಲ್ಲಿ ನಡೆದಿದೆ.
ಸ್ಥಳೀಯ ನಿವಾಸಿ ಚಿಣ್ಣಪ್ಪ (76) ಎಂಬುವವರೇ ಮೃತ ದುರ್ದೈವಿ. ಗುರುವಾರ (ಏ24) ಮಧ್ಯರಾತ್ರಿ ಮನೆಯ ಸಮೀಪ ಏನೋ ಶಬ್ಧವಾಗುತ್ತಿದೆ ಎಂದು ಬಾಗಿಲು ತೆರೆದು ಹೊರ ಬಂದಾಗ ಕಾಡಾನೆ ಏಕಾಏಕಿ ದಾಳಿ ಮಾಡಿದೆ. ಈ ಸಂದರ್ಭ ಚಿಣ್ಣಪ್ಪ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಕಾಡಾನೆ ವಿರುದ್ಧ ಅರಣ್ಯ ಇಲಾಖೆ ಸೂಕ್ತ ಕಾರ್ಯಾಚರಣೆ ನಡೆಸಲಿದೆ ಎಂದು ಭರವಸೆ ನೀಡಿದರು.





