“ರೀ ಸಾರಿ ನಿಮ್ಮ ಅಮ್ಮ, ದೊಡ್ಡಮ್ಮನ ಕಾಟ ತಡೆಯೋಕೆ ಆಗುತ್ತಿಲ್ಲ” ಎಂದು ಡೆತ್‌ನೋಟ್ ಬರೆದಿಟ್ಟು ಮಹಿಳೆ ಆತ್ಮಹತ್ಯೆ
ಕೋಲಾರ: ಪತಿಯ ಕುಟುಂಬಸ್ಥರಿಂದ ಮಾನಸಿಕ ಹಾಗೂ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಡೆತ್‌ನೋಟ್ ಬರೆದಿಟ್ಟು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ಮಾಲೂರು ತಾಲೂಕಿನ ಕಾಡದೇನಹಳ್ಳಿಯಲ್ಲಿ ನಡೆದಿದೆ.
ರಶ್ಮಿ(25) ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ. ರಶ್ಮಿ, ಪತಿ ಮನೆಯಲ್ಲೇ ಡೆತ್‌ನೋಟ್ ಬರೆದಿಟ್ಟು, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ದಿನೇಶ್ ಹಾಗೂ ರಶ್ಮಿ ಖಾಸಗಿ ಫೈನಾನ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. 1 ವರ್ಷದ ಹಿಂದೆ ಇಬ್ಬರೂ ಪ್ರೀತಿಸಿ ಮದುವೆಯಾಗಿದ್ದರು.
ರಶ್ಮಿ ಡೆತ್‌ನೋಟ್‌ನಲ್ಲಿ ʻರೀ ಸಾರಿ ನಿಮ್ಮ ಅಮ್ಮ, ದೊಡ್ಡಮ್ಮನ ಕಾಟ ತಡೆಯೋಕೆ ಆಗುತ್ತಿಲ್ಲ. ಮದುವೆಯಾಗಿ ಬಂದಾಗಿನಿಂದ ನೆಮ್ಮದಿಯೇ ಇಲ್ಲ. ನನ್ನಿಂದ ಸಹಿಸಿಕೊಳ್ಳೋಕೆ ಆಗುತ್ತಿಲ್ಲ. ನನ್ನ ಗಂಡ ಒಳ್ಳೆಯವನೇ, ಆದರೆ ಮನೆಯವರು ಒಳ್ಳೆಯವರಲ್ಲ. ಅದಕ್ಕೆ ನೀವು ಬರುವಷ್ಟರಲ್ಲೇ ಸಾಯುತ್ತಿದ್ದೇನೆ, ಬೈʼ ಎಂದು ಬರೆದಿದ್ದಾರೆ.





