March 12, 2026

ಬಾರ್‌ನಲ್ಲಿ ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆಯು ಕೊಲೆಯಲ್ಲಿ ಅಂತ್ಯ

0
image_editor_output_image1955367860-1745670195130.jpg

ಆನೇಕಲ್: ಬಾರ್‌ನಲ್ಲಿ ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆಯು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಚಗಯ್ಯನದೊಡ್ಡಿಯಲ್ಲಿ ರಾತ್ರಿ ನಡೆದಿದೆ.

ಕೆಂಚಗಯ್ಯನದೊಡ್ಡಿ ನಿವಾಸಿ ಸುರೇಶ್ ಕೊಲೆಯಾದ ವ್ಯಕ್ತಿ. ಕಾಂತರಾಜು ಹಾಗೂ ಆತನ ಗ್ಯಾಂಗ್ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ.

ಗ್ಯಾರೇಜ್‌ನಲ್ಲಿ ಕೆಲಸ ಮಾಡುತ್ತಿದ್ದ ಸುರೇಶ್, ಶುಕ್ರವಾರ ರಾತ್ರಿ ಮದ್ಯ ಸೇವಿಸಲು ಸ್ನೇಹಿತರ ಜೊತೆ ಶ್ಯಾನುಭೋಗನಹಳ್ಳಿ ತರಂಗಿಣಿ ಬಾರ್‌ಗೆ ತೆರಳಿದ್ದ. ಅದೇ ಬಾರ್‌ನಲ್ಲಿ ಆರೋಪಿ ಕಾಂತರಾಜು ಹಾಗೂ ಆತನ ಗ್ಯಾಂಗ್ ಜೋರಾಗಿ ಮಾತನಾಡುತ್ತಾ ಮದ್ಯಸೇವನೆ ಮಾಡುತ್ತಿದ್ದರು.

ಆಗ ಅಲ್ಲೇ ಮದ್ಯ ಸೇವಿಸುತ್ತಿದ್ದ ಸುರೇಶ್, ನಿಧಾನಕ್ಕೆ ಮಾತನಾಡಿ ಎಂದು ಹೇಳಿದ್ದ. ಆಗ ಕಾಂತರಾಜು ನೀನು ಯಾರು ಕೇಳೋಕೆ ಎಂದು ಹೇಳಿದ್ದ. ಈ ವೇಳೆ ಕಾಂತರಾಜು ಮತ್ತು ಸುರೇಶ್ ನಡುವೆ ನೂಕಾಟ-ತಳ್ಳಾಟ ನಡೆದಿದೆ.

Leave a Reply

Your email address will not be published. Required fields are marked *

error: Content is protected !!