ನೇಜಾರು: ತಾಯಿ, ಮೂವರು ಮಕ್ಕಳ ಭೀಕರ ಹತ್ಯೆ ಪ್ರಕರಣ: ಜೂ. 19ರಿಂದ ಸಾಕ್ಷಿಗಳ ವಿಚಾರಣೆ
ಉಡುಪಿ : ತಾಯಿ ಮತ್ತು ಮೂವರು ಮಕ್ಕಳ ಭೀಕರ ಹತ್ಯೆ ಪ್ರಕರಣ ಉಡುಪಿಯ ನೇಜಾರಿನಲ್ಲಿ ನಡೆದಿತ್ತು. ಇದೀಗ ಆರೋಪಿಯ ವಿರುದ್ಧದ ಸಾಕ್ಷಿಗಳ ವಿಚಾರಣೆಗೆ ಡೇಟ್ ಫಿಕ್ಸ್ ಆಗಿದೆ.
ಪ್ರಕರಣದ ಸಾಕ್ಷ್ಯಗಳ ವಿಚಾರಣೆಯ ಆಡಿಯೋ ಮತ್ತು ವಿಡಿಯೋ ದಾಖಲಿಸಬೇಕೆಂಬ ಅರ್ಜಿಯನ್ನು ಜಿಲ್ಲಾ ನ್ಯಾಯಾಲಯದಲ್ಲಿ ತಿರಸ್ಕೃತಗೊಂಡ ಹಿನ್ನೆಲೆಯಲ್ಲಿ ಹೈಕೋರ್ಟ್‌ನಲ್ಲಿ ಸಲ್ಲಿಸಲಾಗಿತ್ತು.
ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೂ.19 ಮತ್ತು ಜೂ.20ರಂದು ಸಾಕ್ಷಿಗಳ ವಿಚಾರಣೆಗೆ ದಿನ ನಿಗದಿ ಪಡಿಸಿದೆ. ಸದ್ಯ ಸಾಕ್ಷಿಗಳ ವಿಚಾರಣೆಗೆ ದಿನ ನಿಗದಿ ಪಡಿಸುವುದು ಬೇಡ ಎಂದು ಆರೋಪಿ ಪ್ರವೀಣ್ ಚೌಗುಲೆ ಪರ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿದರು.





