December 15, 2025

ತಲ್ವಾರು ಹಿಡಿದು ಮನೆಗೆ ನುಗ್ಗಿ ಬೆದರಿಕೆ: ವಿಶ್ವ ಹಿಂದೂ ಪರಿಷತ್ ಮುಖಂಡನ ವಿರುದ್ಧ ವಿಟ್ಲ ಪೊಲೀಸ್‌ ಠಾಣೆಯಲ್ಲಿ FIR ದಾಖಲು

0
image_editor_output_image-1733909089-1745751539778.jpg

ಮಂಗಳೂರು : ವಿಶ್ವ ಹಿಂದೂ ಪರಿಷತ್ ರಾಜ್ಯ ನಾಯಕ ಮುರಳಿ ಕೃಷ್ಣ ಹಸಂತಡ್ಕ ವಿರುದ್ಧ ವಿಟ್ಲ ಪೊಲೀಸ್‌ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

ಹಿಂದೂ ಮಹಿಳೆಯೊಬ್ಬರು ಒಂಟಿಯಾಗಿದ್ದ ಸಂದರ್ಭದಲ್ಲಿ ತಲ್ವಾರು ಹಿಡಿದು ಮನೆಗೆ ನುಗ್ಗಿ ಬೆದರಿಕೆ ಹಾಕಿದ ವಿಚಾರವಾಗಿ ಈ ಎಫ್ ಐ ಆರ್ ದಾಖಲಾಗಿದೆ.

ಬಂಟ್ವಾಳ ತಾಲೂಕಿನ ಹರೀಶ್ ಎಂಬವರು ನೀಡಿದ ದೂರಿನಂತೆ ನ್ಯಾಯಾಲಯದ ಆದೇಶ ಪ್ರಕಾರವಾಗಿ ವಿಟ್ಲ ಪೊಲೀಸರು ಎಫ್ ಐ ಆರ್ ದಾಖಲಿಸಿಕೊಂಡಿದ್ದಾರೆ.

ಏಪ್ರಿಲ್ 16 ರಂದು ಮನೆಯಲ್ಲಿ ತನ್ನ ಪತ್ನಿ ಮನೆಯಲ್ಲಿ ಒಬ್ಬಳೇ ಇದ್ದ ಸಂದರ್ಭದಲ್ಲಿ ಮನೆಗೆ ಪ್ರವೇಶ ಮಾಡಿ ಬೆದರಿಕೆ ಹಾಕಿದ್ದೂ ಅಲ್ಲದೆ ಏಪ್ರಿಲ್ 19 ರಂದು ಕೂಡ ದಂಪತಿಗೆ ತಲ್ವಾ‌ರ್ ಹಿಡಿದು ಬೆದರಿಕೆ ಹಾಕಿದ್ದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!