December 15, 2025

ಮಂಗಳೂರು: ಎ. 29ರಂದು ರೈಲ್ವೆ ನೇಮಕಾತಿ ಪರೀಕ್ಷೆ: ಜನಿವಾರ, ಮಂಳಸೂತ್ರ ಧರಿಸುವಂತಿಲ್ಲ ಎಂದು ಸೂಚನೆ

0
image_editor_output_image1160984790-1745833681338.jpg

ಮಂಗಳೂರು: ಏಪ್ರಿಲ್ 29ರಂದು ನರ್ಸಿಂಗ್ ಸೂಪರಿಟೆಂಡೆಂಟ್ ಪರೀಕ್ಷೆಗಳನ್ನು ರೈಲ್ವೆ ನೇಮಕಾತಿ ಮಂಡಳಿ ಇಲಾಖೆಯು ನಡೆಸಲಿದೆ. ಈ ಪರೀಕ್ಷೆ ವೇಳೆ ಪರೀಕ್ಷಾ ಕೊಠಡಿಯಲ್ಲಿ ಅಭ್ಯರ್ಥಿಗಳು ಧಾರ್ಮಿಕ ಸಂಕೇತಗಳಾದ ಜನಿವಾರ, ಮಂಳಸೂತ್ರ, ಮೊದಲಾದವುಗಳನ್ನು ಧರಿಸುವಂತಿಲ್ಲ ಎಂದು ಸೂಚನೆ ನೀಡಲಾಗಿದೆ.

ಈ ಬಗ್ಗೆ ವಿಎಚ್‌ಪಿಯ ದಕ್ಷಿಣ ಪ್ರಾಂತ ಕಾರ್ಯವಾಹ ಶರಣ್ ಪಂಪ್‌ವೆಲ್‌ ತನ್ನ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ರೈಲ್ವೆ ಪರೀಕ್ಷೆಯ ಮಾರ್ಗಸೂಚಿಗಳನ್ನು ಹಂಚಿಕೊಂಡಿರುವ ಅವರು ಈ ಸೂಚನೆಯನ್ನು ವಿರೋಧಿಸಿದ್ದಾರೆ.

“ರೈಲ್ವೆ ಇಲಾಖೆಯ ನರ್ಸಿಂಗ್‌ ಸೂಪರಿಟೆಂಡೆಂಟ್ ಹುದ್ದೆಗೆ ಪರೀಕ್ಷೆಯು 29 ಏಪ್ರಿಲ್ 2025ರಂದು ಬೋಂದೆಲ್‌ನ ಬೆಸೆಂಟ್ ವಿದ್ಯಾಕೇಂದ್ರದಲ್ಲಿ ನಡೆಯಲಿದ್ದು, ಆ ಪರೀಕ್ಷೆ ಬರೆಯಬೇಕಾದರೆ ಹಿಂದೂಗಳು ಅವರ ಧಾರ್ಮಿಕ ಸಂಪ್ರದಾಯಗಳಾದ ಮಂಗಳಸೂತ್ರ, ಜನಿವಾರ ಗಳನ್ನೂ ತೆಗೆದು ಪರೀಕ್ಷೆ ಬರೆಯುವಂತೆ ಪ್ರವೇಶ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ರೀತಿಯ ಧಾರ್ಮಿಕ ವಿರೋಧಿ ಧೋರಣೆ ಸಹಿಸಲು ಅಸಾಧ್ಯ” ಎಂದು ಶರಣ್ ಪಂಪ್‌ವೆಲ್‌ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!