ಬೆಳ್ತಂಗಡಿ: ವಿದ್ಯಾರ್ಥಿನಿಗೆ ಮೆಸೇಜ್ ಕಳುಹಿಸಿ ಅಸಭ್ಯ ವರ್ತನೆ ಆರೋಪ: ವಾಲಿಬಾಲ್ ತರಬೇತಿದಾರನ ಬಂಧನ
ಬೆಳ್ತಂಗಡಿ: ವಾಲಿಬಾಲ್ ತರಬೇತಿದಾರನೊಬ್ಬ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಗೆ ಮೆಸೇಜ್ ಕಳುಹಿಸಿ ಅಸಭ್ಯವಾಗಿ ವರ್ತಿಸಿದ ಆರೋಪದ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕಾರ್ಕಳ ನಿವಾಸಿ ಸೈಯ್ಯದ್ (24) ಬಂಧಿತ ಆರೋಪಿ. ಈತ ಬೆಳ್ತಂಗಡಿಯ ಖಾಸಗಿ ಕಾಲೇಜಿನ 17ರ ಹರಯದ ವಿದ್ಯಾರ್ಥಿನಿಗೆ ಕೆಲವು ದಿನಗಳಿಂದ ನಿರಂತರ ಮೆಸೇಜ್ ಮಾಡುತ್ತಾ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ಪಡೆದ ಸಂಘಪಾರಿವಾರದ ಕಾರ್ಯಕರ್ತರು ಏ.26 ರಂದು ಉಜಿರೆಯಲ್ಲಿ ಆರೋಪಿಯನ್ನು ಪತ್ತೆಹಚ್ಚಿ ಥಳಿಸಿದ್ದಾರೆ.
ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸ ಪ್ರಕರಣ ದಾಖಲಾಗಿದೆ.





