ಬಂಟ್ವಾಳ: ಮೂಲತಃ ವಿಟ್ಲ ನಿವಾಸಿ ಸುಲೈಮಾನ್ ಅನಾರೋಗ್ಯದಿಂದ ನಿಧನ
ಬಂಟ್ವಾಳ: ನೇರಳಕಟ್ಟೆ ಸಮೀಪದ ಗಣೇಶ ನಗರ ನಿವಾಸಿ ಸುಲೈಮಾನ್ (56) ಅಲ್ಪಕಾಲದ ಅನಾರೋಗ್ಯದಿಂದ ಸೋಮವಾರ ರಾತ್ರಿ ಸ್ವಗೃಹದಲ್ಲಿ ನಿಧನರಾದರು.
ಮೂಲತಃ ವಿಟ್ಲ ಸಮೀಪದ ಒಕ್ಕೆತ್ತೂರು ನಿವಾಸಿಯಾಗಿರುವ ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿ ಸಹಿತ ಅಪಾರ ಸಂಖ್ಯೆಯ ಬಂಧು ಬಳಗವನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆ ಮಂಗಳವಾರ ಬೆಳಗ್ಗೆ 8.00 ಕ್ಕೆ ಕೊಡಾಜೆ ಬದ್ರಿಯಾ ಜುಮಾ ಮಸೀದಿ ವಠಾರದಲ್ಲಿ ನಡೆಯಲಿದೆ ಎಂದು ಕುಟುಂಬಿಕರು ತಿಳಿಸಿದ್ದಾರೆ





