December 15, 2025

ಕಡಬ: ಚಲಿಸುತ್ತಿದ್ದ ಕಾರಿನ ಬಾಗಿಲು ಮತ್ತು ಕಾರಿನ ಮೇಲ್ಬಾಗದಲ್ಲಿ ಕುಳಿತು ಅಪಾಯಕಾರಿ ಚಾಲನೆ

0
n6621379111745906034501b8797265055dde40cdae02c9f4f7fe359ff871b6165f1fc65937b197d98412d3.jpg

ಕಡಬ: ಚಲಿಸುತ್ತಿದ್ದ ಕಾರಿನ ಬಾಗಿಲು ಮತ್ತು ಕಾರಿನ ಮೇಲ್ಬಾಗದಲ್ಲಿ ಕುಳಿತು ಅಪಾಯಕಾರಿ ಸ್ಟಂಟ್ ಮಾಡುತ್ತಾ ಇತರ ವಾಹನಗಳ ಸಂಚಾರಕ್ಕೆ ತೊಂದರೆ ಉಂಟು ಮಾಡಿ ಹುಚ್ಚಾಟ ಮೆರೆದ ಘಟನೆ ಏ. 27ರ ರಾತ್ರಿ ಕಡಬದಲ್ಲಿ ನಡೆದಿದೆ.

ಕಡಬ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಕಡಬದಿಂದ ಆಲಂಕಾರು ವರೆಗೆ ಸುಮಾರು 15 ಕಿ.ಮೀ. ಉದ್ದಕ್ಕೂ ಹಲವು ಕಾರು ಮತ್ತು ದ್ವಿಚಕ್ರ ವಾಹನಗಳಲ್ಲಿ ಕರ್ಕಶವಾಗಿ ನಿರಂತರ ಹಾರ್ನ್ ಹಾಕುತ್ತಾ ಸಂಚಾರ ನಿಯಮ ಉಲ್ಲಂಘಿಸಿ ವಾಹನ ಚಲಾಯಿಸಲಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಇದಕ್ಕೆ ಪೂರಕ ಎಂಬಂತೆ ಎರಡು ವೀಡಿಯೋಗಳು ದೊರೆತಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಹಲವು ಕಾರಿನಲ್ಲಿ ಅಪಾಯಕಾರಿ ರೀತಿಯಲ್ಲಿ ಕುಳಿತು ಹೋಗುತ್ತಿರುವುದು ಇದರಲ್ಲಿದೆ. ಈ ಘಟನೆ ಬಗ್ಗೆ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಇತ್ತೀಚೆಗೆ ಸುಳ್ಯದಲ್ಲಿ ಇದೇ ರೀತಿಯ ಪ್ರಕರಣ ವರದಿಯಾಗಿದ್ದು, ಕಾರಿನಲ್ಲಿ ಈ ರೀತಿ ಅಪಾಯಕಾರಿ ಸ್ಟಂಟ್ ಮಾಡಿದವರ ವಿರುದ್ಧ ಸುಳ್ಯ ಪೊಲೀಸರು ಸುಮೊಟೊ ಕೇಸು ದಾಖಲಿಸಿಕೊಂಡು ಬಳಿಕ ಆರೋಪಿಗಳನ್ನು ಬಂಧಿಸಿದ್ದರು. ಇದೀಗ ಈ ಘಟನೆಯನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಪೊಲೀಸರು ಕ್ರಮಕ್ಕೆ ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!