March 12, 2026

ನಾಲೆಯಲ್ಲಿ ಕಾರು ಪತ್ತೆ: ಕಾರಿನಲ್ಲಿ ತಂದೆ, ಇಬ್ಬರು ಮಕ್ಕಳ ಮೃತದೇಹ ಪತ್ತೆ

0
image_editor_output_image-95891327-1745918963896.jpg

ಮಂಡ್ಯ: ಕಾರಿನಲ್ಲಿ ತಂದೆ ಹಾಗೂ ಇಬ್ಬರು ಮಕ್ಕಳು ಶವವಾಗಿ ಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ವಿ.ಸಿ.ನಾಲೆಯಲ್ಲಿ ನಡೆದಿದೆ. ಮೃತರನ್ನು ಮೈಸೂರು ಜಿಲ್ಲೆಯ ಕೆ.ಆರ್ .ನಗರ ತಾಲೂಕಿನ ಹೆಬ್ಬಾಳು ಗ್ರಾಮದ ಕುಮಾರಸ್ವಾಮಿ (38), ಮಕ್ಕಳಾದ ಅಧ್ವೈತ್ (8) ಹಾಗೂ ಅಕ್ಷತಾ (3) ಎಂದು ಗುರುತಿಸಲಾಗಿದೆ.

ಏ.16 ರಂದು ಮಕ್ಕಳ ಜೊತೆ ಕಾರಿನಲ್ಲಿ ಬೆಂಗಳೂರಿನಿಂದ ಕೆ.ಆರ್.ನಗರಕ್ಕೆ ಹೊರಟಿದ್ದರು. ಆದರೆ ಆ ಬಳಿಕ ಅವರ ಸುಳಿವು ಇರಲಿಲ್ಲ. ಏ.19ರಂದು ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.

ಇದೀಗ ವಿ.ಸಿ.ನಾಲೆಯಲ್ಲಿ ಕಾರೊಂದು ಪತ್ತೆಯಾಗಿದ್ದು, ಅದರಲ್ಲಿ ತಂದೆ ಹಾಗೂ ಇಬ್ಬರ ಮಕ್ಕಳ ಮೃತದೇಹ ಪತ್ತೆಯಾಗಿದೆ. ಕಾರು ನಾಲೆಗೆ ಉರುಳಲು ನಿಖರ ಕಾರಣ ತಿಳಿದುಬಂದಿಲ್ಲ.

ಸ್ಥಳಕ್ಕೆ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲಿಸಿದರು. ಕೆ.ಆರ್.ಎಸ್. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!