December 15, 2025

ಪಾಕಿಸ್ತಾನ್ ಜಿಂದಾಬಾದ್ ಹೇಳಿಕೆ ನನ್ನದಲ್ಲ, ಕೊಲೆ ಆರೋಪಿಗಳು ಹೇಳಿದ್ದನ್ನು ನಾನು ಹೇಳಿದ್ದೇನಷ್ಟೇ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ

0
image_editor_output_image1810151818-1746008098056.jpg

ಮಂಗಳೂರು: ನಗರ ಹೊರವಲಯದ ಕುಡುಪು ಸಮೀಪ ಎ.27ರಂದು 30ಕ್ಕೂ ಅಧಿಕ ಮಂದಿಯ ಗುಂಪೊಂದು ಥಳಿಸಿ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಮಂಗಳವಾರ ಪ್ರತಿಕ್ರಿಯೆ ನೀಡಿದ್ದ ಗೃಹ ಸಚಿವ ಜಿ. ಪರಮೇಶ್ವರ್, ‘ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕಾರಣ’ ಎಂದು ಹೇಳಿದ್ದರು.

ಈ ಬಗ್ಗೆ ಇಂದು ಸ್ಪಷ್ಟನೆ ನೀಡಿದ್ದು, “ಪಾಕಿಸ್ತಾನ್ ಜಿಂದಾಬಾದ್ ಹೇಳಿಕೆ ನನ್ನದಲ್ಲ, ಕೊಲೆ ಆರೋಪಿಗಳದ್ದು” ಎಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, “ನನ್ನ ಹೇಳಿಕೆಯು ಮಾಧ್ಯಮಗಳಲ್ಲಿ ತಪ್ಪಾಗಿ ವರದಿಯಾದದ್ದು ನನ್ನ ಗಮನಕ್ಕೆ ಬಂದಿದೆ. ಹಾಗಾಗಿ, ಈ ಸ್ಪಷ್ಟನೆಯನ್ನು ನೀಡುತ್ತಿದ್ದೇನೆ. ಪಾಕಿಸ್ತಾನ ಜಿಂದಾಬಾದ್ ಹೇಳಿದ ಅಂತ ಕೊಲೆ ಆರೋಪಿಗಳು ಹೇಳಿದ್ದು. ಅದು ನನ್ನದಲ್ಲ” ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!