ಮಂಗಳೂರು: ನಗರದ ಖಾಸಗಿ ಕಾಲೇಜಿನ ಹಿಂಭಾಗದಲ್ಲಿರುವ ಗೋದಾಮಿನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಸುಮಾರು 500 ಕ್ವಿಂಟಾಲ್ ಅಕ್ಕಿಯನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಸಾರ್ವಜನಿಕರಿಂದ ಬಂದ ದೂರುಗಳ ಆಧಾರದ ಮೇಲೆ, ಇಲಾಖೆಯ ಉಪ ನಿರ್ದೇಶಕಿ ಅನಿತಾ ವಿ. ಮಡ್ಲೂರು ಅವರ ನೇತೃತ್ವದಲ್ಲಿ ದಾಳಿ ನಡೆಸಲಾಯಿತು.