ಬೆಳ್ತಂಗಡಿ: ನಿವೃತ್ತ ಲೆಫ್ಟಿನೆಂಟ್ ಗಜಾನನ ವೆಝ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನ
ಬೆಳ್ತಂಗಡಿ: ಭಾರತೀಯ ಸೇನೆಯ ನಿವೃತ್ತ ಲೆಫ್ಟಿನೆಂಟ್ ಬೆಳ್ತಂಗಡಿಯ ಮುಂಡಾಜೆ ಗ್ರಾಮದ ಕಡಂಬಳ್ಳಿ ವಾಳ್ಯದ ದತ್ತ ಕೃಪಾ ನಿವಾಸಿ ಗಜಾನನ ವೆಝ (70) ಅವರು ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನ ಹೊಂದಿದರು. ಮೃತರು ಪತ್ನಿ ಮತ್ತು ಪುತ್ರನನ್ನು ಆಗಲಿದ್ದಾರೆ.
ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಆಗಿ ಕರ್ತವ್ಯ ನಿರ್ವಹಿಸಿದ್ದ ಅವರು ಬಳಿಕ ನೆರಿಯದ ಖಾಸಗಿ ಅನುದಾನಿತ ಶಾಲೆಯಲ್ಲಿ ಮತ್ತು ಮುಂಡಾಜೆ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲಿಸಿದರು.




