March 12, 2026

ಉಪ್ಪಳ: ಕಾರು ಮತ್ತು ಆಟೋ ರಿಕ್ಷಾ ನಡುವೆ ಅಪಘಾತ: ಓರ್ವ ಮೃತ್ಯು

0
n66245100017461095542571c3c32c91be3cfcc374f415c0a05f28d8ef4391c08a542ef7ff46c1a482f0e38.jpg

ಕಾಸರಗೋಡು: ರಾಷ್ಟ್ರೀಯ ಹೆದ್ದಾರಿಯ ಕಾಸರಗೋಡಿನ ಉಪ್ಪಳ ಗೇಟ್ ಸಮೀಪ ಕಾರು ಮತ್ತು ಆಟೋ ರಿಕ್ಷಾ ನಡುವೆ ಅಪಘಾತದಲ್ಲಿ ಓರ್ವ ಮೃತಪಟ್ಟ ಘಟನೆ ಬುಧವಾರ ಸಂಜೆ ನಡೆದಿದೆ. ಆಟೋ ಚಾಲಕ ಕಾಞಾಂಗಾಡ್ ನ ಮೋಹನ್ ಮೃತಪಟ್ಟವರು.

ಮೋಹನ್ ಚಲಾಯಿಸುತ್ತಿದ್ದ ಆಟೋ ರಿಕ್ಷಾ ಮತ್ತು ಕಾರು ನಡುವೆ ಅಪಘಾತ ನಡೆದಿದೆ. ಕಾರು ಮತ್ತು ಆಟೋ ರಿಕ್ಷಾ ನಜ್ಜುಗುಜ್ಜಾಗಿದೆ. ಕಾರಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ. ನಜ್ಜುಗುಜ್ಜಾದ ಆಟೋ ರಿಕ್ಷಾದೊಳಗೆ ಸಿಲುಕಿದ್ದ ಚಾಲಕನನ್ನು ಪೊಲೀಸರು ಹಾಗೂ ನಾಗರಿಕರು ಹೊರತೆಗೆದು ಆಸ್ಪತ್ರೆಗೆ ತಲಪಿದರೂ ಜೀವ ಉಳಿಸಲಾಗಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!