ಮಂಗಳೂರು: ಗುಂಪು ಹತ್ಯೆ ಪ್ರಕರಣ: ಮತ್ತೋರ್ವ ಆರೋಪಿ ಬಂಧನ
ಮಂಗಳೂರು: ಕುಡುಪು ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯ ಬಳಿಕ ತಲೆಮರೆಸಿಕೊಂಡಿದ್ದ ಅನಿಲ್ ಎಂಬಾತನನ್ನು ಗೋಕಾಕದಿಂದ ವಶಕ್ಕೆ ಪಡೆಯಲಾಗಿದೆ. ಇದರೊಂದಿಗೆ ಬಂಧಿತ ಆರೋಪಿಗಳ ಸಂಖ್ಯೆ 21ಕ್ಕೆ ಏರಿಕೆಯಾಗಿದೆ.
ಹಲ್ಲೆ ನಡೆಸಿದ ಬಳಿಕ ತಲೆ ಮರೆಸಿಕೊಂಡವರಿಗಾಗಿ ಪೊಲೀಸರ ತಂಡ ಹುಡುಕಾಟ ನಡೆಸುತ್ತಿದೆ. ಆ ದಿನ ಸ್ಥಳದಲ್ಲಿದ್ದ ಸುಮಾರು 15 ಮಂದಿಗೆ ನೋಟಿಸ್ ನೀಡಿ ವಿಚಾರಣೆಗೆ ಬರಲು ತಿಳಿಸಲಾಗಿದ್ದು, ಕೆಲವರ ವಿಚಾರಣೆ ನಡೆಯುತ್ತಿದೆ.




