ಮಂಗಳೂರು: ರೌಡಿ ಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಹಿನ್ನೆಲೆ: ನಗರದಲ್ಲಿ ನಿಷೇಧಾಜ್ಞೆ ಜಾರಿ
ಮಂಗಳೂರು: ಬಜಪೆಯಲ್ಲಿ ನಡೆದ ರೌಡಿ ಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಹಿನ್ನೆಲೆ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಲಾಗಿದೆ.
ಆದೇಶದಲ್ಲಿ ಭಾರತೀಯ ನ್ಯಾಯ ಸುರಕ್ಷಾ ಸಂಹಿತೆ ಕಲಂ: 163ರಲ್ಲಿ ಪ್ರದತ್ತವಾದ ಅಧಿಕಾರವನ್ನು ಬಳಸಿಕೊಂಡು ದಿನಾಂಕ 2025ರ ಮೇ 2 ಬೆಳಗ್ಗೆ 6 ಗಂಟೆಯಿಂದ ಮೇ 6ರ ಬೆಳಗ್ಗೆ 6ಗಂಟೆಯವರೆಗೆ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
ಹಿಂದುತ್ವಪರ ಕಾರ್ಯಕರ್ತ, ರೌಡಿ ಶೀಟರ್ ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳ ತಂಡವು ಬಜಪೆಯ ಕಿನ್ನಿಪದವಿನಲ್ಲಿ ತಲವಾರಿನಿಂದ ಕೊಚ್ಚಿ ಗುರುವಾರ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಸುಹಾಸ್ ಶೆಟ್ಟಿ ವಿರುದ್ಧ ಎರಡು ಕೊಲೆ ಪ್ರಕರಣಗಳೂ ಸೇರಿದಂತೆ ಐದು ಪ್ರಕರಣಗಳು ದಾಖಲಾಗಿದ್ದವು. ಸುರತ್ಕಲ್‌ನಲ್ಲಿ 2022ರ ಜುಲೈ 28ರಂದು ನಡೆದಿದ್ದ ಕಾಟಿಪಳ್ಳ ಮಂಗಳಪೇಟೆಯ ಮಹಮ್ಮದ್ ಫಾಝಿಲ್ ಹತ್ಯೆ ಪ್ರಕರಣದಲ್ಲಿ ಸುಹಾಸ್ ಶೆಟ್ಟಿ ಪ್ರಮುಖ ಆರೋಪಿಯಾಗಿದ್ದ. ಕಳೆದ ವರ್ಷ ಜಾಮೀನಿನ ಮೇಲೆ ಹೊರಗೆ ಬಂದಿದ್ದ ಎಂದು ತಿಳಿದುಬಂದಿದೆ.




