March 12, 2026

ಮಂಗಳೂರು: ರೌಡಿ ಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಆರೋಪಿಗಳ ಸುಳಿವು ಪತ್ತೆ: ಎಡಿಜಿಪಿ ಆರ್.ಹಿತೇಂದ್ರ

0
IMG-20250502-WA0002.jpg

ಮಂಗಳೂರು: ರೌಡಿ ಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿಗಳ ಸುಳಿವು ಪತ್ತೆಯಾಗಿದೆ ಎಂದು ಎಡಿಜಿಪಿ ಆರ್.ಹಿತೇಂದ್ರ ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ಸುಹಾಸ್ ಶೆಟ್ಟಿ ಮೇಲೆ ದಾಳಿ ನಡೆಸಿ ಪರಾರಿಯಾದ ಆರೋಪಿಗಳು ಯಾರು ಎಂದು ನಮಗೆ ಗೊತ್ತಾಗಿದೆ. ಆರೋಪಿಗಳ ಬಂಧನಕ್ಕೆ ತಂಡ ರಚನೆ ಮಾಡುತ್ತೇವೆ. ಆರೋಪಿಗಳ ಸುಳಿವನ್ನು ಈಗಾಗಲೇ ಪತ್ತೆ ಹಚ್ಚಿಲಾಗಿದೆ ಎಂದು ಹೇಳಿದ್ದಾರೆ. ಕಾನೂನು ಕೈಗೆತ್ತಿಕೊಂಡವರ ಮೇಲೆ ಕಾನೂನು ರೀತಿ ಕ್ರಮ ಆಗಲಿದೆ ಎಂದು ಹಿತೇಂದ್ರ ಹೇಳಿದ್ದಾರೆ.

ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಸಂಬಂಧ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗಿದ್ದು, ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಹೆಚ್ಚುವರಿಯಾಗಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆ ವರೆಗೆ ನಿಷೇಜಾಜ್ಞೆ ಇರಲಿದೆ. ಯಾವುದೇ ರೀತಿಯ ಅಹಿತಕರ ಘಟನೆಗೆ ಅವಕಾಶವಿಲ್ಲ ಎಂದು ಹಿತೇಂದ್ರ ಹೇಳಿದ್ದಾರೆ. ಯಾವುದೇ ವದಂತಿಗೆ ಕಿವಿ ಕೊಡಬೇಡಿ. ಎಲ್ಲರು ಶಾಂತಿ ಕಾಪಾಡಬೇಕಾಗಿ ಹಿತೇಂದ್ರ ಮನವಿ ಮಾಡಿದ್ದಾರೆ.

ನಿನ್ನ(ಮೇ.01) ರಾತ್ರಿ ಸುಹಾಸ್ ಶೆಟ್ಟಿ ಹಾಗೂ ಮತ್ತೆ ಐವರು ಸಂಚರಿಸುತ್ತಿದ್ದ ಇನೋವಾ ಕಾರನ್ನು ಅಡ್ಡಗಟ್ಟಿ ಅಪರಿಚಿತರು ದಾಳಿ ನಡೆಸಿದ್ದರು. ದಾಳಿಗೆ ಬಳಸಿದ್ದ ಮೀನಿನ ವಾಹನ , ಸ್ವಿಫ್ಟ್ ಕಾರ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ದಾಳಿಗೆ ಬಳಸಿದ ಕಾರಿನಲ್ಲಿ ಆಯುಧಗಳು ಪತ್ತೆಯಾಗಿದೆ. ಇತ್ತ ಸುಹಾಸ್ ಶೆಟ್ಟಿಯ ಇನೋವಾ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!