ವಿಟ್ಲ: ಸಂಘಪರಿವಾರ ಕರೆ ನೀಡಿದ ದ.ಕ ಜಿಲ್ಲಾ ಬಂದ್ ಗೆ ವಿಟ್ಲ ಪೇಟೆ ಸಂಪೂರ್ಣ ಬಂದ್
ವಿಟ್ಲ: ಸುಹಾಸ್ ಶೆಟ್ಟಿ ಹತ್ಯೆಯನ್ನು ಖಂಡಿಸಿ, ಸಂಘಪರಿವಾರ ನೀಡಿದ ಬಂದ್ ಗೆ ವಿಟ್ಲದಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.

ಬೆಳಿಗ್ಗೆ ಕೇರಳ ರಾಜ್ಯದ ಮತ್ತು ಕರ್ನಾಟಕದ ಕೆಎಸ್ ಆರ್ ಟಿ ಸಿ ಬಸ್ ಗಳ ಸಂಚಾರ ಮಾಡಿತ್ತು. ಬಳಿಕ ಸಂಚಾರ ಸಂಚಾರ ಸ್ಥಗಿತಗೊಳಿಸಿದೆ. ಇನ್ನೂ ಖಾಸಗಿ ಬಸ್ ಗಳು ಬೆಳಿಗ್ಗೆನಿಂದಲೇ ರಸ್ತೆಗೆ ಇಳಿಯಲಿಲ್ಲ. ತುರ್ತು ಸೇವೆಗಳಾದ ಆಸ್ಪತ್ರೆ, ಮೆಡಿಕಲ್, ಹಾಲಿನ ಅಂಗಡಿ ಹೊರತುಪಡಿಸಿ ಉಳಿದೆಲ್ಲ ಅಂಗಡಿ ಮುಗ್ಗಟ್ಟು ಬಂದ್ ಆಗಿದೆ. ವಿಟ್ಲ ಪೊಲೀಸರು ಅಲ್ಲಲ್ಲಿ ನಾಕಾಬಂಧಿ ಅಳವಡಿಸಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ.




