March 12, 2026

ಎಸ್ಸೆಸ್ಸೆಲ್ಸಿ ಪರೀಕ್ಷೆ-1ರಲ್ಲಿ ಅಡ್ಯನಡ್ಕ ಜನತಾ ಪ್ರೌಢಶಾಲೆಗೆ 73.07 ಶೇ. ಫಲಿತಾಂಶ;

0
image_editor_output_image1399868499-1746191286179

ಅಡ್ಯನಡ್ಕ: ಅಡ್ಯನಡ್ಕ ಜನತಾ ಪ್ರೌಢಶಾಲೆಯು 2024-25ನೇ ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ-1ರಲ್ಲಿ 73.07 ಶೇ. ಫಲಿತಾಂಶ ಪಡೆದಿದ್ದು, ಪರೀಕ್ಷೆಗೆ ಹಾಜರಾದ 26 ವಿದ್ಯಾರ್ಥಿಗಳಲ್ಲಿ 19 ಮಂದಿ ಉತ್ತೀರ್ಣರಾಗಿದ್ದಾರೆ.


ಲಿಖಿತ್ ಕುಮಾರ್ ಸಿ. ಎಚ್. 575 ಅಂಕ ಹಾಗೂ ದೀಕ್ಷಿತ್ 571 ಅಂಕ ಪಡೆದು ಎ+ ಗ್ರೇಡ್‌ನಲ್ಲಿ ಉತ್ತೀರ್ಣರಾಗಿದ್ದಾರೆ. ವೀಕ್ಷಾ 532 ಅಂಕ ಮತ್ತು ಪ್ರತೀಕ್ಷಾ ಶೆಟ್ಟಿ 508 ಅಂಕ ಪಡೆದು ಎ ಗ್ರೇಡ್‌ನಲ್ಲಿ ಉತ್ತೀರ್ಣರಾಗಿದ್ದಾರೆ. ಇನ್ನು, 6 ಮಂದಿ ಬಿ+, ಇಬ್ಬರು ಸಿ+, 7 ಮಂದಿ ಸಿ ಗ್ರೇಡ್ ಪಡೆದಿದ್ದಾರೆ.


ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ಅಡ್ಯನಡ್ಕ ಎಜುಕೇಶನಲ್ ಸೊಸೈಟಿ(ರಿ) ಆಡಳಿತ ಮಂಡಳಿಯ ಅಧ್ಯಕ್ಷರು, ಸಂಚಾಲಕರು, ಆಡಳಿತಾಧಿಕಾರಿಗಳು, ಸದಸ್ಯರು, ಮುಖ್ಯೋಪಾಧ್ಯಾಯರು ಮತ್ತು ಅಧ್ಯಾಪಕ ವೃಂದ ಹಾಗೂ ಜನತಾ ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಅಭಿನಂದನೆಗಳನ್ನು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!