March 12, 2026

ಶಾಸಕ ಸ್ಥಾನಕ್ಕೆ ಶಿವಾನಂದ ಪಾಟೀಲ್ ರಾಜೀನಾಮೆ

0
n6627001791746193910879b31b2b350be95dae0cea56b8eed74cdb820405fc626a7e676fc89bd99e33a03b.jpg

ಬೆಂಗಳೂರು: ಶಾಸಕ ಸ್ಥಾನಕ್ಕೆ ಶಿವಾನಂದ ಪಾಟೀಲ್ ರಾಜೀನಾಮೆ ಸಲ್ಲಿಸಿದ್ದು, ಸ್ಪೀಕರ್ ಯು.ಟಿ ಖಾದರ್ ಅವರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ವಿಜಯಪುರ ಶಾಸಕರಾದ ಶ್ರೀ ಬಸನಗೌಡ ಆರ್ ಪಾಟೀಲ(ಯತ್ನಾಳ್) ಅವರು ತಮ್ಮ ವಿಜಯಪುರ ಮತಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ, ನನ್ನ ವಿರುದ್ಧ ಬಸವನ ಬಾಗೇವಾಡಿ ಮತ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ಸವಾಲು ಹಾಕಿದ್ದಾರೆ. ನಾನು ಅವರ ಸವಾಲನ್ನು ಸ್ವೀಕರಿಸಿ, ಅವರ ವಿರುದ್ಧ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಹಾಗಾಗಿ ನಾನು ಪ್ರತಿನಿಧಿಸುತ್ತಿರುವು ಬಸವನ ಬಾಗೇವಾಡಿ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ.

ಆದುದರಿಂದ ಶ್ರೀ ಬಸನಗೌಡ ಆರ್ ಪಾಟೀಲ(ಯತ್ನಾಳ್) ಅವರು ಸವಾಲು ಹಾಕಿರುವಂತೆ ಅವರ ಶಾಸಕ ಸ್ಥಾನ್ಕಕೆ ರಾಜೀನಾಮೆ ಸಲ್ಲಿಸಿ, ಅವರ ರಾಜೀನಾಮೆ ಅಂಗೀಕಾರಾದರೆ ಮಾತ್ರ ನನ್ನ ರಾಜೀನಾಮೆಯನ್ನು ಅಂಗೀಕರಿಸುವಂತೆ ತಮ್ಮಲ್ಲಿ ಕೋರುತ್ತೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಶಿವಾನಂದ ಪಾಟೀಲ್ ಅವರು ಪ್ರಸ್ತುತ ಕರ್ನಾಟಕ ಸರ್ಕಾರದಲ್ಲಿ ಕೈಗಾರಿಕೆ, ಜವಳಿ, ಕಬ್ಬು ಅಭಿವೃದ್ಧಿ, ಮತ್ತು ಸಕ್ಕರೆ ನಿರ್ದೇಶನಾಲಯದ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಇತ್ತೀಚೆಗೆ ಮಹಮ್ಮದ್ ಪೈಗಂಬರ್ ವಿರುದ್ಧ ಹೇಳಿಕೆ ನೀಡಿರುವ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧದ ಜಿಲ್ಲೆಯಾದ್ಯಂತ ಪ್ರತಿಭಟನೆ ನಡೆಸಲಾಗಿತ್ತು. ಅದಕ್ಕೆ ಯತ್ನಾಳ್‌ ಅವರು ಬಹಿರಂಗ ಸವಾಲೆಸಿದ್ದಿದ್ದು, ನಿನಗೆ ಧಮ್‌ ಇದ್ದರೆ ರಾಜಿನಾಮೆ ನೀಡಿ ಪಕ್ಷೇತರನಾಗಿ ಸ್ಪರ್ಧೆ ಮಾಡು ಎಂದಿದ್ದರು. ಇದೀಗ ಸವಾಲನ್ನು ಸ್ವೀಕರಿಸಿರುವ ಶಿವಾನಂದ ಪಾಟೀಲ್‌ ರಾಜಿನಾಮೆ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!