SSLC ಪರೀಕ್ಷೆಯಲ್ಲಿ ಆರಕ್ಕೆ ಆರೂ ವಿಷಯದಲ್ಲಿ ಫೇಲ್: ಮಗನ ಜೊತೆ ಕೇಕ್ ಕತ್ತರಿಸಿ ಸಂಭ್ರಮಿಸಿದ ತಂದೆ ತಾಯಿ
ಬಾಗಲಕೋಟೆ: ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಫೇಲ್ ಆದ ಮಗನಿಗೆ ಪೋಷಕರು ಕೇಕ್ ಕತ್ತರಿಸಿ ತಿನ್ನಿಸಿ ಸಂಭ್ರಮಸಿದ್ದಾರೆ. ಬಾಗಲಕೋಟೆಯಲ್ಲಿ ಈ ಘಟನೆ ನಡೆದಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಆರಕ್ಕೆ ಆರೂ ವಿಷಯದಲ್ಲಿ ಫೇಲ್ ಆದ ಮಗನಿಗೆ ಪೋಷಕರು ಕೇಕ್ ತಿನ್ನಿಸಿ ಆತ್ಮಸ್ಥೈರ್ಯ ತುಂಬಿಸಿದ್ದಾರೆ.
ಫೆಲ್ ಆದರೆ ವಿಧ್ಯಾರ್ಥಿಗಳ ಮನೋಬಲ ಕುಗ್ಗಿಸುವ ಬದಲು ಆತ್ಮಸ್ಥೈರ್ಯ ತುಂಬಿಸಿ ಮನಸ್ಸಿಗೆ ಸಂತೋಷ ಉಂಟುಮಾಡಲು ತಂದೆ, ತಾಯಿ ಸಹೋದರ, ಸಹೋದರಿ, ಅಜ್ಜಿ ಹಾಗೂ ಕುಟುಂಬವರು ಕೇಕ್ ತಿನ್ನಿಸಿದ್ದಾರೆ. ಬಾಗಲಕೋಟೆಯ ನವನಗರದ ಅಭಿಷೇಕ್ ನಿನ್ನೆ ಪ್ರಕಟವಾದ 10ನೇ ತರಗತಿ ವಾರ್ಷಿಕ ಪರೀಕ್ಷೆಯ ಫಲಿತಾಂಶದಲ್ಲಿ ಆರಕ್ಕೆ ಆರೂ ವಿಷಯಕ್ಕೆ ಅನುತ್ತೀರ್ಣನಾಗಿದ್ದ. ಬೇಸರದಲ್ಲಿದ್ದ ಅಭಿಷೇಕ್‌ಗೆ ಆತ್ಮಸ್ಥೈರ್ಯ ತುಂಬಲು ಅಚ್ಚರಿ ಎಂಬಂತೆ ಪೋಷಕರು ಕೇಕ್ ತಿನ್ನಿಸಿ ಸಿಹಿ ಮುತ್ತು ನೀಡಿ ಸಮಾಧಾನ ಮಾಡಿದ್ದಾರೆ.




