ಮೈಗೆ ಬಾಂಬ್ ಕಟ್ಟಿಕೊಂಡು ಪಾಕಿಸ್ತಾನ ವಿರುದ್ಧ ಯುದ್ಧಕ್ಕೆ ಹೋಗಲೂ ಸಿದ್ಧ: ಸಚಿವ ಝಮೀರ್ ಅಹ್ಮದ್
ವಿಜಯನಗರ: ದೇಶಕ್ಕಾಗಿ ಯಾವುದೇ ತ್ಯಾಗಕ್ಕೆ ನಾನು ಸಿದ್ಧ. ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮ್ಮತಿಸಿದರೆ ಮೈಗೆ ಬಾಂಬ್ ಕಟ್ಟಿಕೊಂಡು ಯುದ್ಧಕ್ಕೆ ಹೋಗಲೂ ಸಿದ್ಧ’ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ಹೇಳಿದರು.
ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಏರ್ಪಟ್ಟಿರುವ ವಿಚಾರವಾಗಿ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನ ನಮ್ಮ ವಿರೋಧಿ ರಾಷ್ಟ್ರ. ಅದರ ಮೇಲೆ ಕೇಂದ್ರ ಸರ್ಕಾರ ಯುದ್ಧ ಸಾರಿದರೆ, ನನಗೆ ಅವಕಾಶ ನೀಡಲಿ. ನಾನು ಗಡಿಯಲ್ಲಿ ಯುದ್ಧಕ್ಕೆ ಹೋಗಲು ಸಿದ್ಧನಿದ್ದೇನೆ ಎಂದಿದ್ದಾರೆ.
ಕೇಂದ್ರ ಸರ್ಕಾರ ಪಾಕಿಸ್ತಾನದ ಮೇಲೆ ಕೂಡಲೇ ಯುದ್ಧ ಸಾರಲಿ. ಗಡಿಯಲ್ಲಿ ನಿಂತು ಭಾರತಕ್ಕಾಗಿ ಹೋರಾಟ ಮಾಡುತ್ತೇವೆ. ಭಾರತ ಯಾವತ್ತಿದ್ದರೂ ಹಿಂದೂಸ್ಥಾನ ಎಂದು ಹೇಳಿದ್ದಾರೆ.




