March 12, 2026

ಕನ್ನಡ.. ಕನ್ನಡ ಇದೇ ಕಾರಣದಿಂದ ಪಹಲ್ಗಾಮ್ ದಾಳಿಯಾಗಿದ್ದು: ಪ್ರಚೋದನಕಾರಿ ಹೇಳಿಕೆ ನೀಡಿದ ಗಾಯಕ ಸೋನು ನಿಗಮ್ ವಿರುದ್ಧ FIR ದಾಖಲು

0
sonu_nigam_1746067080628_1746067081036.jpg

ಬೆಂಗಳೂರು: ಕನ್ನಡಿಗರ ಭಾವನೆಗಳಿಗೆ ನೋವುಂಟು ಮಾಡಿದ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಖ್ಯಾತ ಗಾಯಕ ಸೋನು ನಿಗಮ್ ವಿರುದ್ಧ ಬೆಂಗಳೂರಿನ ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಕರ್ನಾಟಕ ರಕ್ಷಣಾ ವೇದಿಕೆ ಬೆಂಗಳೂರು ನಗರ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಎ.ಧರ್ಮರಾಜ ಅವರು ಸೋನು ನಿಗಮ ವಿರುದ್ಧ ವಿಡಿಯೋ ಸಮೇತ ಪೊಲೀಸರಿಗೆ ದೂರು ನೀಡಿದ್ದರು.

ಕರ್ನಾಟಕ ರಕ್ಷಣಾ ವೇದಿಕೆ ಶುಕ್ರವಾರ ರಾತ್ರಿ ನೀಡಿದ ದೂರಿನ ಆಧಾರದ ಮೇಲೆ ಭಾರತೀಯ ನ್ಯಾಯ ಸಂಹಿತಾ(ಬಿಎನ್‌ಎಸ್) ಸೆಕ್ಷನ್ 352(1), 352(2), ಮತ್ತು 353 ರ ಅಡಿಯಲ್ಲಿ ಸೋನು ನಿಗಮ್ ವಿರುದ್ಧ ಕೇಸ್ ದಾಖಲಿಸಲಾಗಿದೆ.

ಸೋನು ನಿಗಮ್ ಅವರು ಏಪ್ರಿಲ್ 25 ಮತ್ತು 26ರಂದು ಈಸ್ಟ್ ಪಾಯಿಂಟ್ ಕಾಲೇಜ್ ಆಫ್ ಎಂಜಿನಿಯರಿಂಗ್ ಆಯಂಡ್‌ ಟೆಕ್ನಾಲಜಿಯಲ್ಲಿ ನಡೆದ ಸಂಗೀತ ಕಾರ್ಯಕ್ರಮದಲ್ಲಿ ಕನ್ನಡಿಗರ ಭಾವನೆಗಳನ್ನು ಕೆರಳಿಸುವ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆಯ ವಿಡಿಯೋ ದಾಖಲಾಗಿದ್ದು, ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಮನವಿ ಮಾಡಿದ್ದಾರೆ. ಈಸ್ಟ್ ಪಾಯಿಂಟ್ ಕಾಲೇಜು ಕಾರ್ಯಕ್ರಮದಲ್ಲಿ ಸೋನು ನಿಗಮ್ ಭಾಗವಹಿಸಿದ್ದರು. ಈ ವೇಳೆ ವಿದ್ಯಾರ್ಥಿಯೊಬ್ಬ ಕನ್ನಡ ಹಾಡು ಹೇಳುವಂತೆ ಕೇಳಿದ್ದು, ಅದು ಸಾಮಾನ್ಯ ಕೂಡ ಆಗಿತ್ತು.

ಆದರೆ, ಈ ವೇಳೆ ತಾಳ್ಮೆ ಕಳೆದುಕೊಂಡ ಸೋನು ನಿಗಮ್ ಅವರು, ತಮ್ಮ ಹಾಡನ್ನು ಅರ್ಧಕ್ಕೆ ನಿಲ್ಲಿಸಿ ‘ಕನ್ನಡ.. ಕನ್ನಡ ಇದೇ ಕಾರಣದಿಂದ ಪಹಲ್ಗಾಮ್ ದಾಳಿಯಾಗಿದ್ದು’ ಎಂದು ಹೇಳಿದ್ದಾರೆ. ಈ ಹೇಳಿಕೆ ಇದೀಗ ಕನ್ನಡಿಗರ ಕಣ್ಣು ಕೆಂಪಗಾಗುವಂತೆ ಮಾಡಿದ್ದು, ಸೋನು ನಿಗಮ್ ಅವರ ಕುರಿತು ತೀವ್ರ ಟೀಕೆ ವ್ಯಕ್ತವಾಗುತ್ತಿರುವುದಲ್ಲದೇ, ಬ್ಯಾನ್ ಮಾಡಬೇಕೆಂಬ ಆಗ್ರಹಗಳೂ ಕೇಳಿ ಬರುತ್ತಿವೆ.

Leave a Reply

Your email address will not be published. Required fields are marked *

error: Content is protected !!