ಬೆಳ್ತಂಗಡಿ: ಆಟವಾಡುತ್ತಿದ್ದಾಗ ಹೃದಯಾಘಾತ: 16 ವರ್ಷದ ಬಾಲಕ ಮೃತ್ಯು
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಜೋಡುಸ್ಥಾನ ನಿವಾಸಿ ಒಂಭತ್ತನೇ ತರಗತಿ ಮುಗಿಸಿ ಹತ್ತನೇ ತರಗತಿ ಹೋಗಬೇಕಾದ ವಿಧ್ಯಾರ್ಥಿಯೊಬ್ಬ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ಘಟನೆ ಮೇ 4ರಂದು ಸಂಭವಿಸಿದೆ.
ಮೃತಪಟ್ಟ ಬಾಲಕನನ್ನು ಧರ್ಮಸ್ಥಳದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಗೋವಿಂದ ಗೌಡ ಅವರ ಪುತ್ರ ಪ್ರಥಮ್ (16) ಎಂದು ಗುರುತಿಸಲಾಗಿದೆ.
ಮೇ 4 ರ ಮಧ್ಯಾಹ್ನ, ಪ್ರಥಮ್ ತಮ್ಮ ಮನೆಯ ಬಳಿ ಆಟವಾಡುತ್ತಿದ್ದಾಗ ಎದೆನೋವು ಕಾಣಿಸಿಕೊಂಡಿತು. ಅವರನ್ನು ತಕ್ಷಣ ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ಪ್ರಯತ್ನಗಳ ಹೊರತಾಗಿಯೂ ಅವರನ್ನು ಉಳಿಸಲಾಗಲಿಲ್ಲ.ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




