June 21, 2026

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಜನಾರ್ದನ ರೆಡ್ಡಿ ದೋಷಿ ಎಂದು ತೀರ್ಪು: 7 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

0
IMG-20250506-WA0002.jpg

ಹೈದರಾಬಾದ್: ಅನಂತಪುರ ಜಿಲ್ಲೆಯ ಓಬಳಾಪುರಂ ಮೈನಿಂಗ್ ಕಂಪನಿ (OMC) ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಹೈದರಾಬಾದ್‌ನ ಸಿಬಿಐ ವಿಶೇಷ ನ್ಯಾಯಾಲಯ ಮಂಗಳವಾರ ಶಾಸಕ ಜನಾರ್ದನ ರೆಡ್ಡಿ ಅವರನ್ನು ದೋಷಿ ಎಂದು ತೀರ್ಪು ನೀಡಿದೆ. ಪ್ರಕರಣದಲ್ಲಿ ಅವರಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಅಂದಿನ ಆಂಧ್ರಪ್ರದೇಶ ಸರ್ಕಾರದ ಕೋರಿಕೆಯಂತೆ 2009 ರಲ್ಲಿ ಸಿಬಿಐ ತನಿಖೆಯನ್ನು ಪ್ರಾರಂಭಿಸಲಾಗಿತ್ತು. 2011 ರಲ್ಲಿ ಸಿಬಿಐ ತನ್ನ ಮೊದಲ ಚಾರ್ಜ್‌ಶೀಟ್ ಸಲ್ಲಿಸಿತು. ನಂತರ ಐಎಎಸ್ ಅಧಿಕಾರಿ ಶ್ರೀಲಕ್ಷ್ಮಿ, ಜನಾರ್ದನ ರೆಡ್ಡಿ ಅವರ ಆಪ್ತ ಸಹಾಯಕಿ ಮೆಫಾಝ್ ಅಲಿ ಖಾನ್ ಮತ್ತು ಮಾಜಿ ಸಚಿವೆ ಸಬಿತಾ ಇಂದ್ರಾ ರೆಡ್ಡಿ ಸೇರಿದಂತೆ ಒಂಭತ್ತು ಆರೋಪಿಗಳನ್ನು ಹೆಸರಿಸಿ ಚಾರ್ಜ್‌ಶೀಟ್‌ಗಳನ್ನು ಸಲ್ಲಿಸಲಾಗಿತ್ತು.

ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ವಿಚಾರಣೆ ನಡೆದಿತ್ತು. ನ್ಯಾಯಾಲಯವು ಮೇ ತಿಂಗಳೊಳಗೆ ವಿಚಾರಣೆ ಪೂರ್ಣಗೊಳಿಸಲು ಗಡುವು ವಿಧಿಸಿದ ನಂತರ ಕಳೆದ ತಿಂಗಳು ವಾದಗಳನ್ನು ಮುಕ್ತಾಯಗೊಳಿಸಲಾಗಿತ್ತು.

Leave a Reply

Your email address will not be published. Required fields are marked *

error: Content is protected !!