May 4, 2026

ಉಡುಪಿ: ಕಾಂತಾರ-2 ಚಿತ್ರ ತಂಡದ ಜೂನಿಯರ್ ಆರ್ಟಿಸ್ಟ್ ನೀರಿನಲ್ಲಿ ಮುಳುಗಿ ಸಾವು

0
n663267385174655699400550b7c0282d730f5d49bad8c8b5c5e1f27d9827579f7ce2d09707c7d991e70eb8.jpg

ಉಡುಪಿ: ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ- 2 ಸೆಟ್ ನಲ್ಲಿದ್ದ ಜೂನಿಯರ್ ಆರ್ಟಿಸ್ಟ್ ನದಿಯಲ್ಲಿ ಮುಳುಗಿ ದಾರುಣವಾಗಿ ಮೃತಪಟ್ಟ ಘಟನೆ ಮಂಗಳವಾರ ಕೊಲ್ಲೂರು ಸೌಪರ್ಣಿಕಾ ನದಿಯಲ್ಲಿ ನಡೆದಿದೆ.

ಕೇರಳ ಮೂಲದ ಜೂನಿಯರ್ ಆರ್ಟಿಸ್ಟ್ ಕಪಿಲ್ ನೀರಿನಲ್ಲಿ ಮುಳುಗಿ ಸಾವಿಗೀಡಾದ ದುರ್ದೈವಿ. ಉಡುಪಿ ಜಿಲ್ಲೆಯ ಬೈಂದೂರಿನ ಕೊಲ್ಲೂರಿನಲ್ಲಿ ಘಟನೆ ನಡೆದಿದೆ.

ಕೊಲ್ಲೂರು ಭಾಗದಲ್ಲಿ ‘ಕಾಂತಾರ ಚಾಪ್ಟರ್ 1’ ಶೂಟಿಂಗ್ ನಡೆಯುತ್ತಿತ್ತು. ಶೂಟಿಂಗ್ ಮುಗಿಸಿ ಕಪಿಲ್‌ ಮತ್ತು ತಂಡ ಸೌಪರ್ಣಿಕ ನದಿಗೆ ಈಜಾಡಲು ತೆರಳಿದ್ದರು. ಈ ವೇಳೆ ಅವಘಡ ಸಂಭವಿಸಿದೆ. ಕಪಿಲ್‌ ಮೃತದೇಹವನ್ನು ಕುಂದಾಪುರದ ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿ ಇಡಲಾಗಿದೆ. ನಾಳೆ ಕಪಿಲ್ ಅವರ ಮನೆಯವರು ಬಂದ ನಂತರ ಮರಣೋತ್ತರ ಪರೀಕ್ಷೆ ನಡೆಯಲಿದೆ.

ಈ ಹಿಂದೆ ಕೊಲ್ಲೂರಿನಲ್ಲೇ ಜೂನಿಯರ್ ಆರ್ಟಿಸ್ಟ್ ಗಳಿದ್ದ ಬಸ್ ಪಲ್ಟಿಯಾಗಿ ಅಪಘಾತ ಸಂಭವಿಸಿತ್ತು. ಬಳಿಕ ಗಾಳಿ ಮಳೆಗೆ ಬೃಹತ್ ಸೆಟ್ ಹಾರಿ ಹೋಯಿತು. ಇದರ ಬೆನ್ನಲ್ಲೇ ಜೂನಿಯರ್ ಆರ್ಟಿಸ್ಟ್ ದಾರುಣ ಸಾವನ್ನಪ್ಪಿದ್ದ ಘಟನೆ ನಡೆದಿದೆ.

Leave a Reply

Your email address will not be published. Required fields are marked *

You may have missed

error: Content is protected !!