March 12, 2026

ಪಾಕಿಸ್ತಾನದ ಒಂಭತ್ತು ಸ್ಥಳಗಳನ್ನು ಗುರಿಯಾಗಿರಿಸಿಕೊಂಡು ಸೇನಾ ದಾಳಿ: ಭಾರತೀಯ ಶಸ್ತ್ರಾಸ್ತ್ರ ಪಡೆಗಳಿಂದ ‘ಆಪರೇಷನ್ ಸಿಂದೂರ್’ ಕಾರ್ಯಾಚರಣೆ

0
images.jpeg

ನವದೆಹಲಿ: ‘ಆಪರೇಷನ್ ಸಿಂಧೂರ್’ ಎಂಬ ಹೆಸರಿನ ಕಾರ್ಯಾಚರಣೆಯಲ್ಲಿ, ಭಾರತೀಯ ಸಶಸ್ತ್ರ ಪಡೆಗಳು ಬುಧವಾರ ಮುಂಜಾನೆ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ದಲ್ಲಿನ ಭಯೋತ್ಪಾದಕ ನೆಲೆಗಳ ಮೇಲೆ ದಾಳಿ ನಡೆಸಿವೆ ಎಂದು ಭಾರತದ ರಕ್ಷಣಾ ಸಚಿವಾಲಯ ತಿಳಿಸಿದೆ.

ಆಪರೇಷನ್ ಸಿಂಧೂರ್’ ಅಡಿಯಲ್ಲಿ ಭಾರತೀಯ ಸೇನಾ ಕಾರ್ಯಾಚರಣೆಯ ಪರಿಣಾಮವಾಗಿ ಪಾಕಿಸ್ತಾನ ಮತ್ತು ಪಿಒಕೆಯಲ್ಲಿ ಸ್ಫೋಟಗಳ ವರದಿಗಳು ಬಂದಿವೆ ಎಂದು ರಕ್ಷಣಾ ಸಚಿವಾಲಯ ದೃಢಪಡಿಸಿದ ಸ್ವಲ್ಪ ಸಮಯದ ನಂತರ, ಭಾರತೀಯ ಸೇನೆಯು ಎಕ್ಸ್‌ ಪೋಸ್ಟ್‌ನಲ್ಲಿ “ನ್ಯಾಯ ದೊರಕಿತು. ಜೈ ಹಿಂದ್!” ಎಂದು ತಿಳಿಸಿದೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಎಕ್ಸ್‌ನಲ್ಲಿ ‘ಭಾರತ್ ಮಾತಾ ಕಿ ಜೈ’ ಎಂದು ಬರೆದಿದ್ದಾರೆ. ಪಾಕಿಸ್ತಾನದಲ್ಲಿ ಒಂಭತ್ತು ಸ್ಥಳಗಳನ್ನು ಗುರಿಯಾಗಿರಿಸಿಕೊಂಡು ಸೇನಾ ದಾಳಿಗಳು ನಡೆದಿದೆ ಎಂದು ಪತ್ರಿಕಾ ಮಾಹಿತಿ ಬ್ಯೂರೋ ಪ್ರಕಟಣೆಯಲ್ಲಿ ತಿಳಿಸಿದೆ.

ಪಾಕಿಸ್ತಾನದ ವಿದೇಶಾಂಗ ಸಚಿವಾಲಯ ಹೇಳಿಕೆಯೊಂದರಲ್ಲಿ, ಭಾರತೀಯ ವಾಯುಪಡೆಯು ಮುರಿಡ್ಕೆ ಮತ್ತು ಬಹಾವಲ್ಪುರದಲ್ಲಿನ ಅಂತರರಾಷ್ಟ್ರೀಯ ಗಡಿಯುದ್ದಕ್ಕೂ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ ಕೋಟ್ಲಿ ಮತ್ತು ಮುಜಫರಾಬಾದ್‌ನಲ್ಲಿರುವ ನಿಯಂತ್ರಣ ರೇಖೆಯಾದ್ಯಂತದ ಶಸ್ತ್ರಾಸ್ತ್ರಗಳನ್ನು ಬಳಸಿ ದಾಳಿ ನಡೆಸಿದೆ ಎಂದು ತಿಳಿಸಿದೆ.

ದಾಳಿಗಳಿಂದಾಗಿ ಸಾವುನೋವುಗಳು ಸಂಭವಿಸಿದೆ ಎಂದು ಹೇಳಿಕೊಂಡ ಪಾಕಿಸ್ತಾನವು, “ತಾನು ಆಯ್ಕೆ ಮಾಡಿದ ಸಮಯ ಮತ್ತು ಸ್ಥಳದಲ್ಲಿ ದಾಳಿಗೆ ಸೂಕ್ತವಾಗಿ ಪ್ರತಿಕ್ರಿಯಿಸಲಿದೆ” ಎಂದು ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!