December 16, 2025

ರೌಡಿಶೀಟರ್ ಸಂತೋಷ್ ಕುಮಾರ್ ಹತ್ಯೆ ಪ್ರಕರಣ: 10 ಮಂದಿ ಆರೋಪಿಗಳ ಬಂಧನ

0
image_editor_output_image-945909675-1746601194215

ದಾವಣಗೆರೆ: ರೌಡಿಶೀಟರ್​ ಸಂತೋಷ್​ ಕುಮಾರ್​ ಹತ್ಯೆ ಪ್ರಕರಣದ 10 ಮಂದಿ ಆರೋಪಿಗಳು ಹೊಳಲ್ಕೆರೆ ಠಾಣೆ ಪೊಲೀಸರ ಎದುರು ಶರಣಾಗಿದ್ದಾರೆ.

ಪ್ರಕರಣ ಸಂಬಂಧ 12 ಜನರ ವಿರುದ್ಧ ದಾವಣಗೆರೆಯ ವಿದ್ಯಾನಗರ ಠಾಣೆಯಲ್ಲಿ ಎಫ್​ಐಆರ್​​ ದಾಖಲಾಗಿದೆ. ಮೃತ ಸಂತೋಷ್​ ಕುಮಾರ್ ಪತ್ನಿ ಶ್ರುತಿ ದೂರಿನ ಮೇರೆಗೆ ಆರೋಪಿಗಳಾದ ಕಾರ್ತಿಕ್​(22), ಚವಳಿ ಸಂತು(30), ನವೀನ್(26) ನವೀನ್(26), ಗುಂಡಪ್ಪ(32), ಬಸವರಾಜ್(22), ಹನುಮಂತಪ್ಪ(23), ಗಿಡ್ಡ ವಿಜಿ(27), ಚಿಕ್ಕಮ್ಮನಹಳ್ಳಿ ಶಿವು(30), ಕಡ್ಡಿ ರಾಘು(27), ಪ್ರಶಾಂತ್(28) ಮತ್ತು ನಿಟ್ಟುವಳ್ಳಿಯ ಗಣಿ ಸೇರಿದಂತೆ ಇತರರ ವಿರುದ್ಧ ಎಫ್ ​ಐಆರ್ ದಾಖಲಾಗಿದೆ.

ಬಹುತೇಕ ಆರೋಪಿಗಳು ಹತ್ಯೆಯಾದ ಸಂತೋಷ್​ ಕುಮಾರ್ ​ನ ಆಪ್ತರಾಗಿದ್ದಾರೆ. ರೌಡಿಶೀಟರ್ ಬುಳ್ಳ ನಾಗನ ಹತ್ಯೆಯಲ್ಲೂ ಇದೇ ಆರೋಪಿಗಳು ಭಾಗಿಯಾಗಿದ್ದರು. ಇದೇ ಗ್ಯಾಂಗ್​ ನಿಂದ ಸಂತೋಷ್​ ಕುಮಾರ್ ಅಲಿಯಾಸ್ ಕಣುಮಾ ಹತ್ಯೆಯಾಗಿದೆ. ಸೋಮವಾರ ದಾವಣಗೆರೆಯ ಸೋಮೇಶ್ವರ ಆಸ್ಪತ್ರೆ ಬಳಿ ಮಾರಕಾಸ್ತ್ರಗಳಿಂದ ಕೊಚ್ಚಿ ಸಂತೋಷ್​ ಕುಮಾರ್​ನನ್ನು ಆರೋಪಿಗಳು ಹತ್ಯೆಗೈದಿದ್ದರು.

ಕೊಲೆಯಾದ ರೌಡಿಶೀಟರ್ ಕಣುಮ​ ಸಂತೋಷ್​ ಕುಮಾರ್ ಮೂಲತಃ ಚಿತ್ರದುರ್ಗ ಜಿಲ್ಲೆಯ ಹಿರಿಯೂರ ಬಳಿಯ ಮಾರಿ ಕಣವಿ ನಿವಾಸಿಯಾಗಿದ್ದನು. ಸಂತೋಷ ಕುಮಾರ್​ ತಾಯಿಯ ತವರು ದಾವಣಗೆರೆಯಾದ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ನೆಲೆಸಿದ್ದರು. ಸಂತೋಷ ಕುಮಾರ್​ ದಾವಣಗೆರೆ ಜಿಲ್ಲೆಯಲ್ಲಿನ ರೌಡಿಶೀಟರ್ ಗಳಾದ ಬುಳ್ಳ್ ನಾಗಾ, ಜೈಮ್ ಯೋಗಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದನು.

Leave a Reply

Your email address will not be published. Required fields are marked *

error: Content is protected !!