March 12, 2026

ಮಂಗಳೂರು: ಪಂಜಿಮೊಗರಿನಲ್ಲಿ ಕತ್ತಿ ಝಳಪಿಸಿದ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

0
1682536804_index-scaled.jpeg

ಮಂಗಳೂರು: ಪಂಜಿಮೊಗರು ಮತ್ತು ಶಾಂತಿನಗರ ಪ್ರದೇಶಗಳಲ್ಲಿ ಸಾರ್ವಜನಿಕವಾಗಿ ಕತ್ತಿ ಝಳಪಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಿಜೈಯ ವಿಷ್ಣು (18) ಮತ್ತು ಕಾಪಿಕಾಡ್‌ನ ವೇಣುಗೋಪಾಲ್(19) ಬಂಧಿತ ಆರೋಪಿಗಳು.

ಇತ್ತೀಚೆಗೆ ಪಂಜಿಮೊಗರು ಮತ್ತು ಶಾಂತಿನಗರ ಪ್ರದೇಶಗಳಲ್ಲಿ ಕತ್ತಿ ಝಳಪಿಸಿ ಸಾರ್ವಜನಿಕರಿಗೆ ಭಯದ ವಾತಾವರಣವನ್ನುಂಟು ಮಾಡಿದ ಈ ಘಟನೆಗೆ ಸಂಬಂಧಿಸಿದಂತೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದರಲ್ಲಿ ಆರೋಪಿಗಳಾಗಿರುವ ಇಬ್ಬರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆಗೊಳಪಡಿಸಿದಾಗ ಆರೋಪಿಗಳು ಪಂಜಿಮೊಗರು ಮತ್ತು ಶಾಂತಿನಗರ ಪ್ರದೇಶಗಳಲ್ಲಿ ಕತ್ತಿ ಝಳಪಿಸಿ ಸಾರ್ವಜನಿಕರಿಗೆ ಭಯದ ವಾತಾವರಣವನ್ನುಂಟು ಮಾಡಿದ ಪ್ರಕರಣದಲ್ಲಿ ಆರೋಪಿಗಳಾಗಿರುವ ವಿಚಾರ ಬೆಳಕಿಗೆ ಬಂದಿತ್ತು.

ಇದೀಗ ನ್ಯಾಯಾಂಗ ಬಂಧನದಲ್ಲಿರುವ ಆರೋಪಿಗಳನ್ನು ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗುವುದು ಎಂದು ಮಂಗಳೂರು ನಗರ ಪೊಲೀಸರ ಪ್ರಕಟಣೆಯಲ್ಲಿ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!