March 12, 2026

ಆಪರೇಷನ್‌ ಸಿಂಧೂರ: ಮಾಧ್ಯಮ ವಿವರಣೆ ನೀಡಿದ ಕರ್ನಲ್ ಸೋಫಿಯಾ ಖುರೇಷಿ ಯಾರು? ಇವರ ಹಿನ್ನೆಲೆ ಹೀಗಿದೆ

0
Colonel-Sophia-Qureshi_50eeb289-009f-482f-9924-3a639bde13e3.jpg

ನವದೆಹಲಿ: ಭಾರತೀಯ ಸೇನೆಯು ಬುಧವಾರ ಮುಂಜಾನೆ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ (PoK) ಒಂಬತ್ತು ಉಗ್ರಗಾಮಿ ತಾಣಗಳ ಮೇಲೆ ಯಶಸ್ವಿಯಾಗಿ ದಾಳಿ ನಡೆಸಿ, ಉಗ್ರರ ತರಬೇತಿ ಶಿಬಿರಗಳನ್ನು ಧ್ವಂಸಗೊಳಿಸಿದೆ. ಈ ಕಾರ್ಯಾಚರಣೆಗೆ ‘ಆಪರೇಷನ್ ಸಿಂಧೂರ’ ಎಂದು ನಾಮಕರಣ ಮಾಡಲಾಗಿದೆ.

ಭಾರತೀಯ ಸೇನೆಯ ಕರ್ನಲ್ ಸೋಫಿಯಾ ಖುರೇಶಿ ಮತ್ತು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರು ಜಂಟಿಯಾಗಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಕಾರ್ಯಾಚರಣೆಯ ವಿವರಗಳನ್ನು ಬಹಿರಂಗಪಡಿಸಿದರು.

ಯಾರು ಈ ಸೋಫಿಯಾ ಖುರೇಷಿ?
ಭಾರತೀಯ ಸೇನೆಯ ಕಾರ್ಪ್ಸ್ ಆಫ್ ಸಿಗ್ನಲ್ಸ್‌ನ ಅತ್ಯಂತ ಗೌರವಾನ್ವಿತ ಅಧಿಕಾರಿಯಾಗಿರುವ ಕರ್ನಲ್ ಸೋಫಿಯಾ ಕುರೇಶಿ ಬಲವಾದ ಮಿಲಿಟರಿ ಹಿನ್ನೆಲೆಯನ್ನು ಹೊಂದಿದ್ದಾರೆ. 2016ರಲ್ಲಿ ಮಿಲಿಟರಿ ಸಮರಾಭ್ಯಾಸದಲ್ಲಿ ಭಾರತೀಯ ಸೇನಾ ತುಕಡಿಯನ್ನು ಮುನ್ನಡೆಸಿದ ಮೊದಲ ಮಹಿಳಾ ಅಧಿಕಾರಿಯಾಗಿ ಅವರು ಇತಿಹಾಸವನ್ನು ಸೃಷ್ಟಿಸಿದ್ದರು. ಅದು ಆ ಸಮಯದಲ್ಲಿ ಭಾರತವು ಆಯೋಜಿಸಿದ್ದ ಅತಿ ದೊಡ್ಡ ಮಿಲಿಟರಿ ಕವಾಯತು ಆಗಿದ್ದು,ಭಾಗವಹಿಸಿದ್ದ 18 ದೇಶಗಳ ಪೈಕಿ ಸೋಫಿಯಾ ಏಕೈಕ ಮಹಿಳಾ ಕಮಾಂಡರ್ ಆಗಿದ್ದರು.

ಮೂಲತ ಗುಜರಾತಿನವರಾಗಿರುವ ಸೋಫಿಯಾ ಜೀವರಸಾಯನ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. 1999ರಲ್ಲಿ ಚೆನ್ನೈನ ಆಫೀಸರ್ಸ್ ಟ್ರೈನಿಂಗ್ ಅಕಾಡಮಿಯಿಂದ ಲೆಫ್ಟಿನಂಟ್ ಆಗಿ ಸೇನೆಗೆ ಸೇರ್ಪಡೆಗೊಂಡಿದ್ದರು.

ಮಿಲಿಟರಿ ಬೇರುಗಳನ್ನು ಹೊಂದಿರುವ ಕುಟುಂಬದಿಂದ ಬಂದಿರುವ ಅವರ ಅಜ್ಜ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ್ದರು. ಸೋಫಿಯಾರ ಪತಿ ಯಾಂತ್ರೀಕೃತ ಪದಾತಿ ದಳದಲ್ಲಿ ಅಧಿಕಾರಿಯಾಗಿದ್ದಾರೆ.

ಸೋಫಿಯಾ 2006ರಲ್ಲಿ ಕಾಂಗೋದಲ್ಲಿ ವಿಶ್ವಸಂಸ್ಥೆಯ ಶಾಂತಿಪಾಲನಾ ಕಾರ್ಯಾಚರಣೆಯಲ್ಲಿಯೂ ಸೇವೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!