March 12, 2026

ಉತ್ತರಾಖಂಡ: ಹೆಲಿಕಾಪ್ಟರ್ ಪತನ: ಆರು ಮಂದಿ ಮೃತ್ಯು

0
86vfts7_uttarakhand-chopper-crash-_625x300_08_May_25.jpg

ಉತ್ತರಾಖಂಡ: ಉತ್ತರಕಾಶಿ ಜಿಲ್ಲೆಯ ಗಂಗಾನಣಿ ಬಳಿ ಗುರುವಾರ ಹೆಲಿಕಾಪ್ಟರ್ ಪತನಗೊಂಡು ಪೈಲಟ್ ಸೇರಿದಂತೆ ಆರು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಗಂಗಾನಣಿ ಬಳಿ ಈ ಘಟನೆ ನಡೆದಿದೆ. ಹೆಲಿಕಾಪ್ಟರ್ ಪತನದ ವೇಳೆ ಪೈಲಟ್ ಸೇರಿದಂತೆ ಆರು ಮಂದಿ ಪ್ರಯಾಣಿಕರಿದ್ದರು ಎಂದು ತಿಳಿದು ಬಂದಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ವಿಮಾನ ಪತನಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ.

ಪ್ರಯಾಣಿಕರಿಂದ ತುಂಬಿದ್ದ ಹೆಲಿಕಾಪ್ಟರ್ ಡೆಹ್ರಾಡೂನ್‌ನಿಂದ ಹರ್ಸಿಲ್ ಹೆಲಿಪ್ಯಾಡ್‌ಗೆ ತೆರಳುತ್ತಿತ್ತು. ಪೊಲೀಸರು, ಸೇನಾ ಪಡೆ, ವಿಪತ್ತು ನಿರ್ವಹಣಾ ತಂಡ ಮತ್ತು ಆಂಬ್ಯುಲೆನ್ಸ್‌ಗಳು ಉತ್ತರಕಾಶಿ ಬಳಿಯ ಘಟನಾ ಸ್ಥಳಕ್ಕೆ ತೆರಳಿವೆ. ಅಪಘಾತದ ಕುರಿತಂತೆ ಮತ್ತಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ, ಪರಿಹಾರ ಮತ್ತು ರಕ್ಷಣಾ ಕಾರ್ಯಕ್ಕಾಗಿ ರಾಜ್ಯ ವಿಪತ್ತು ನಿರ್ವಹಣಾ ಪಡೆ ಮತ್ತು ಜಿಲ್ಲಾಡಳಿತ ತಂಡಗಳು ಸ್ಥಳಕ್ಕೆ ತೆರಳಿವೆ. ಗಾಯಗೊಂಡವರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲು ಮತ್ತು ಅಪಘಾತದ ಬಗ್ಗೆ ತನಿಖೆ ನಡೆಸಲು ಸೂಚಿಸಿರುವುದಾಗಿ ಹೇಳಿದರು.

Leave a Reply

Your email address will not be published. Required fields are marked *

error: Content is protected !!