March 12, 2026

ನೆಲ್ಯಾಡಿ: ಚೂರಿಯಿಂದ ಇರಿದು ಯುವಕನ ಕೊಲೆ

0
image_editor_output_image554039679-1746857390224

ಪುತ್ತೂರು: ಚಾಕುವಿನಿಂದ ಇರಿದು ಯುವಕನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಶುಕ್ರವಾರ ರಾತ್ರಿ ನೆಲ್ಯಾಡಿ ಹೊರ ಠಾಣಾ ವ್ಯಾಪ್ತಿಯ ಮಾದೇರಿ ಸಮೀಪ ನಡೆದಿದೆ.

ಮನೆಯ ಅಂಗಳದಲ್ಲೇ ಚಾಕುವಿನಿಂದ ಇರಿದು ಕೊಲೆಗೈಯಲಾಗಿದ್ದು ಮೃತ ಯುವಕನನ್ನು ಮಾದೇರಿ ನಿವಾಸಿ ಶರತ್ ಎಂದು ಗುರುತಿಸಲಾಗಿದೆ.

ಕೌಟುಂಬಿಕ ಕಲಹ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ. ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!