March 12, 2026

ಮಂಗಳೂರು: ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಹಿನ್ನೆಲೆ: ಡ್ರೋನ್ ಹಾರಾಟ ನಿರ್ಬಂಧ

0
AdobeStock-279189314.jpg

ಮಂಗಳೂರು: ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಹಿನ್ನೆಲೆ ನಗರದಲ್ಲಿ ಡ್ರೋನ್ ಹಾರಾಟಕ್ಕೆ ಕಡಿವಾಣ ಹಾಕಲಾಗಿದೆ. ಮುಂದಿನ ನಾಲ್ಕು ದಿನಗಳ ಕಾಲ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಡ್ರೋನ್ ಹಾರಾಟ ಮತ್ತು ಡ್ರೋನ್ ಚಿತ್ರೀಕರಣ ನಡೆಸುವುದನ್ನು ನಿಷೇಧಿಸಿ ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರು ಶನಿವಾರ ಆದೇಶ ಹೊರಡಿಸಿದ್ದಾರೆ.

ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆ ಬರುವಂತಹ ಯಾವುದೇ ಘಟನೆಗಳು ನಡೆಯದಂತೆ ಮತ್ತು ಸಾರ್ವಜನಿಕ ಹಿತದೃಷ್ಟಿಯಿಂದ ಈ ಆದೇಶ ಹೊರಡಿಸಿದ್ದಾರೆ ಎಂದು ಹೇಳಲಾಗಿದೆ.

ಮೇ 10ರ ಸಂಜೆ 4 ಗಂಟೆಯಿಂದ ಮೇ 14ರ ಸಂಜೆ 4 ಗಂಟೆಯವರೆಗೆ ಡ್ರೋನ್ ನಿಯಮ 2021ರ ರೂಲ್ಸ್ 24ರ ಅಡಿಯಲ್ಲಿ ಕಮಿಷನರೇಟ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಡ್ರೋನ್ ಬಳಕೆ ಹಾರಾಟ ಹಾಗು ಡ್ರೋನ್ ಮೂಲಕ ಚಿತ್ರೀಕರಣ ನಡೆಸುವುದನ್ನು ನಿಷೇಧಿಸಲಾಗಿದೆ. ನಾಲ್ಕು ದಿನಗಳ ಕಾಲ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಡ್ರೋನ್ ಬಳಸಿ ಚಿತ್ರೀಕರಣಕ್ಕೆ ಅವಕಾಶವಿಲ್ಲ ಎಂದು ಹೇಳಲಾಗಿದೆ.

Leave a Reply

Your email address will not be published. Required fields are marked *

error: Content is protected !!