July 6, 2026

ಡಿಸೆಂಬರ್ 31 ಕರ್ನಾಟಕ ಬಂದ್ ಗೆ ಕರೆ:
ಎಮ್ಇಎಸ್ ನಿಷೇಧಿಸಲು ಆಗ್ರಹ

0
928439-unlock-5.0.jpg

ಬೆಳಗಾವಿ: ಗಡಿಜಿಲ್ಲೆ ಬೆಳಗಾವಿಯಲ್ಲಿ ಕನ್ನಡಿಗರು, ಕನ್ನಡ ನಾಡಿನ ಆಸ್ತಿಪಾಸ್ತಿ ಮೇಲೆ ಎಂಇಎಸ್ (ಮಹಾರಾಷ್ಟ್ರ ಏಕೀಕರಣ ಸಮಿತಿ-MES ) ದಬ್ಬಾಳಿಕೆ ಹಾಗೂ ಖಂಡಿಸಿ, ಸಂಘಟನೆಯನ್ನು ಕರ್ನಾಟಕದಲ್ಲಿ ನಿಷೇಧ ಮಾಡಬೇಕೆಂದು ಒತ್ತಾಯಿಸಿ ವಿವಿಧ ಕನ್ನಡಪರ ಸಂಘಟನೆಗಳು ಹೊಸ ವರ್ಷ ಮುನ್ನಾದಿನ ಡಿಸೆಂಬರ್ 31ರಂದು ಕರ್ನಾಟಕ ಬಂದ್ ಗೆ ಕರೆ ನೀಡಿವೆ.

ಕರ್ನಾಟಕ, ಕನ್ನಡ ನಾಡು ನುಡಿಯ ಒಗ್ಗಟ್ಟಿಗೆ ಕನ್ನಡಿಗರು ಈ ಸಂದರ್ಭದಲ್ಲಿ ಒಟ್ಟಾಗಿ ಶಕ್ತಿಯನ್ನು ಪ್ರದರ್ಶಿಸಬೇಕು. 25ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ಸೂಚಿಸಿವೆ. ಕನ್ನಡಿಗರೆಲ್ಲರೂ ನಮಗೆ ಬೆಂಬಲ ನೀಡಬೇಕು. ಡಿಸೆಂಬರ್ 31ರಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಬೇರೆಲ್ಲಾ ಸೇವೆಗಳಿಗೆ ವ್ಯತ್ಯಯವುಂಟಾಗಲಿದೆ ಎಂದು ಕನ್ನಡ ವಾಟಾಳ್ ಪಕ್ಷದ ವಾಟಾಳ್ ನಾಗರಾಜ್ ಇಂದು ಬೆಂಗಳೂರಿನಲ್ಲಿ ಘೋಷಿಸಿದ್ದಾರೆ.

ಗಡಿಜಿಲ್ಲೆ ಬೆಳಗಾವಿ ಸೇರಿದಂತೆ ಕರ್ನಾಟಕದಲ್ಲಿ ಎಂಇಎಸ್ ದಬ್ಬಾಳಿಕೆ, ದೌರ್ಜನ್ಯ ಹಿನ್ನೆಲೆಯಲ್ಲಿ ಎಂಇಎಸ್ ಸಂಘಟನೆ ನಿಷೇಧಕ್ಕೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು ಡಿಸೆಂಬರ್ 31ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದ್ದು, ಎಂಇಎಸ್ ಬ್ಯಾನ್ ಮಾಡುವಂತೆ ಸರ್ಕಾರಕ್ಕೆ ಡೆಡ್‌ಲೈನ್ ನೀಡಿದರೂ ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಸ್ಪಷ್ಟ ಸಂದೇಶ ರವಾನಿಸಲು ಬಂದ್ ಗೆ ಕರೆ ನೀಡಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.

Leave a Reply

Your email address will not be published. Required fields are marked *

You may have missed

error: Content is protected !!