May 4, 2026

ವಿಟ್ಲ: ‘ದಿ ನಾಲೇಡ್ಜ್ ಹಬ್’ ವತಿಯಿಂದ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆ ಸಾಧಕರಿಗೆ ಸನ್ಮಾನ

0
IMG-20250511-WA0001.jpg

ವಿಟ್ಲ: ದಿ ನಾಲೇಡ್ಜ್ ಹಬ್ ವತಿಯಿಂದ ಸಂಸ್ಥೆಯ ಪ್ರಥಮ ವರ್ಷದ ಸಂಭ್ರಮದ ಪ್ರಯುಕ್ತ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಮೇ 13ರ ಮಂಗಳವಾರ ವಿಟ್ಲದ ಮೋತಿ ಸಿಟಿಯಲ್ಲಿ ನಡೆಯಲಿದೆ‌.

ಒಡಿಯೂರು ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಜನಪ್ರಿಯ ಫೌಂಡೇಶನ್ ನ ಅಧ್ಯಕ್ಷ
ಡಾ. ವಿ.ಕೆ ಅಬ್ದುಲ್ ಬಶೀರ್, ವಿಟ್ಲ ಸರಕಾರಿ ಫ್ರೌಢ ಶಾಲೆಯ ಗೌರವಾಧ್ಯಕ್ಷ ಸುಬ್ರಾಯ ಪೈ, ವಿಟ್ಲ ಪಟ್ಟಣ ಪಂಚಾಯಿತಿ ಅಧ್ಯಕ್ಷ ಕರುಣಾಕರ ನಾಯ್ತೋಟ್ಟು, ಸೈಂಟ್ ಶಾಲೆಯ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಸಿಸ್ಟರ್ ಮರೀನಾ, ಹೊರೈಝನ್ ಪಬ್ಲಿಕ್ ಸ್ಕೂಲ್ ನ ಅಧ್ಯಕ್ಷ ಅಝೀಜ್ ಸನ, ಜೇಸಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಉಪ ಪ್ರಾಂಶುಪಾಲೆ ಜ್ಯೋತಿ ಶೆಣೈ, ಬಂಟ್ವಾಳ ಜಂಇಯ್ಯತುಲ್ ಫಲಾಹ್ ಅಧ್ಯಕ್ಷ ರಶೀದ್ ವಿಟ್ಲ, ವಿಟ್ಲ ಎಜ್ಯುಕೇಶನ್ ಟ್ರಸ್ಟ್ ನ ಅಧ್ಯಕ್ಷ ಬಾಬು ಕೆ.ವಿ, ವಿಟ್ಲ ಹೊರೈಝನ್ ಪಬ್ಲಿಕ್ ಸ್ಕೂಲ್ ನ ಮುಖ್ಯ ಶಿಕ್ಷಕ ಮನಾಝಿರ್ ಮುಡಿಪು, ವಿಠಲ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಆದರ್ಶ ಚೊಕ್ಕಾಡಿ, ಜೇಸಿಐ ಭಾರತ್ ಇದರ ವಲಯ ಉಪಾಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಪೆಲ್ತಡ್ಕ, ವಿಠಲ ಫ್ರೌಢ ಶಾಲೆಯ ಮುಖ್ಯ ಶಿಕ್ಷಕ ಕಿರಣ್ ಕುಮಾರ್ ಬ್ರಹ್ಮಾವರ, ಡಿ ಗ್ರೂಪ್ ಅಧ್ಯಕ್ಷ ಶಾಕೀರ್ ಅಳಕೆಮಜಲು, ಇನೋಳಿ ಬ್ಯಾರೀಸ್ ಎಂಜಿನಿಯರಿಂಗ್ ಕಾಲೇಜಿನ ಪ್ರೊಫೆಸರ್ ಮುಸ್ತಫಾ ಖಲೀಲ್, ಮೋತಿ ಸಿಟಿಯ ಮಾಲಕ ಅಬ್ದುಲ್ ರಫೂಫ್ ಮೊದಲಾದವರು ಭಾಗವಹಿಸಲಿದ್ದಾರೆ.

ವಿಟ್ಲ ಆಸುಪಾಸಿನ ಶಾಲೆಯ ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ಸ್ಕೂಲ್ ಟಾಪರ್ಸ್ ವಿದ್ಯಾರ್ಥಿಗಳಿಗೆ ಸನ್ಮಾನ ನಡೆಯಲಿದೆ. ನಾಲೇಡ್ಜ್ ಹಬ್ ನಲ್ಲಿ ಟ್ಯೂಷನ್ ಪಡೆದು ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ ಮತ್ತು ಸ್ಫೋಕನ್ ಇಂಗ್ಲೀಷ್ ಮತ್ತು ಮೆಹಂದಿ ಕೋರ್ಸ್ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ ನಡೆಯಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!