ವಿಟ್ಲ: ದಿ ನಾಲೇಡ್ಜ್ ಹಬ್ ನ ಪ್ರಥಮ ವರ್ಷದ ಸಂಭ್ರಮ: ವಿಟ್ಲ ಆಸುಪಾಸಿನ ಶಾಲೆಯ ಒಟ್ಟು 32 ವಿದ್ಯಾರ್ಥಿಗಳಿಗೆ ಒಂದೇ ವೇದಿಕೆಯಲ್ಲಿ ಸನ್ಮಾನ
ವಿಟ್ಲ: ದಿ ನಾಲೇಡ್ಜ್ ಹಬ್ ವತಿಯಿಂದ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ವಿಟ್ಲದ ಮೋತಿ ಸಿಟಿಯಲ್ಲಿ ನಡೆಯಿತು.


ಕಾರ್ಯಕ್ರಮವನ್ನು ಉದ್ಘಾಟಿಸಿ, ಆಶೀರ್ವಚನ ನೀಡಿದ ಒಡಿಯೂರು ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಅವರು ಉತ್ತಮ ಶಿಕ್ಷಣ ದೊರೆತಾಗ ಸಮಾಜದಲ್ಲಿ ಸತ್ಪ್ರಜೆಯಾಗಿ ಬದಲು ಸಾಧ್ಯವಾಗಿದೆ. ಹೆತ್ತವರ, ಶಿಕ್ಷಕ ಪ್ರೋತ್ಸಾಹದಿಂದಾಗಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದರು.
ವಿಟ್ಲ ಆಸುಪಾಸಿನ ಶಾಲಾ-ಕಾಲೇಜಿನ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಉತ್ತಮ ಸಾಧನೆಗೈದ ಸುಮಾರು 32 ವಿದ್ಯಾರ್ಥಿಗಳನ್ನು ಸ್ವಾಮೀಜಿ ಸನ್ಮಾನಿಸಿದರು. ಉತ್ತಮ ಪ್ರಾಂಶುಪಾಲ ಪ್ರಶಸ್ತಿ ವಿಜೇತ ಕಂಬಳಬೆಟ್ಟು ಜನಪ್ರಿಯ ಸೆಂಟ್ರಲ್ ಸ್ಕೂಲ್ ನ ಪ್ರಾಂಶುಪಾಲ ಲಿಬಿನ್ ಝೇವಿಯರ್ ಮತ್ತು ಕಾರ್ಟೂನ್ ಸ್ಪರ್ಧೆಯಲ್ಲಿ ರಾಷ್ಟೀಯ ಪ್ರಶಸ್ತಿ ಪಡರದ ವಿಠಲ ಪ್ರೌಢ ಶಾಲೆಯ ಡ್ರಾಯಿಂಗ್ ಶಿಕ್ಷಕ ಉದಯ ವಿಟ್ಲ ಅವರನ್ನು ಸನ್ಮಾನಿಸಲಾಯಿತು.
ನಾಲೇಡ್ಜ್ ಹಬ್ ನಲ್ಲಿ ಟ್ಯೂಷನ್ ಪಡೆದು ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ ಮತ್ತು ಸ್ಫೋಕನ್ ಇಂಗ್ಲೀಷ್ ಮತ್ತು ಮೆಹಂದಿ ಕೋರ್ಸ್ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ ನಡೆಯಿತು.
ಜನಪ್ರಿಯ ಫೌಂಡೇಶನ್ ನ ಅಧ್ಯಕ್ಷ
ಡಾ. ವಿ.ಕೆ ಅಬ್ದುಲ್ ಬಶೀರ್, ವಿಟ್ಲ ಪಟ್ಟಣ ಪಂಚಾಯಿತಿ ಅಧ್ಯಕ್ಷ ಕರುಣಾಕರ ನಾಯ್ತೋಟ್ಟು, ಹೊರೈಝನ್ ಪಬ್ಲಿಕ್ ಸ್ಕೂಲ್ ನ ಅಧ್ಯಕ್ಷ ಅಝೀಜ್ ಸನ, ಜೇಸಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಉಪ ಪ್ರಾಂಶುಪಾಲೆ ಜ್ಯೋತಿ ಶೆಣೈ, ಬಂಟ್ವಾಳ ಜಂಇಯ್ಯತುಲ್ ಫಲಾಹ್ ಅಧ್ಯಕ್ಷ ರಶೀದ್ ವಿಟ್ಲ, ವಿಟ್ಲ ಎಜ್ಯುಕೇಶನ್ ಟ್ರಸ್ಟ್ ನ ಅಧ್ಯಕ್ಷ ಬಾಬು ಕೆ.ವಿ, ವಿಟ್ಲ ಹೊರೈಝನ್ ಪಬ್ಲಿಕ್ ಸ್ಕೂಲ್ ನ ಮುಖ್ಯ ಶಿಕ್ಷಕ ಮನಾಝಿರ್ ಮುಡಿಪು, ವಿಠಲ ಫ್ರೌಢ ಶಾಲೆಯ ಮುಖ್ಯ ಶಿಕ್ಷಕ ಕಿರಣ್ ಕುಮಾರ್ ಬ್ರಹ್ಮಾವರ, ಡಿ ಗ್ರೂಫ್ ಅಧ್ಯಕ್ಷ ಶಾಕೀರ್ ಅಳಕೆಮಜಲು, ಇನೋಳಿ ಬ್ಯಾರೀಸ್ ಎಂಜಿನಿಯರಿಂಗ್ ಕಾಲೇಜಿನ ಪ್ರೊಫೆಸರ್ ಮುಸ್ತಫಾ ಖಲೀಲ್, ಕಲಂದರ್ ಪರ್ತಿಪ್ಪಾಡಿ, ಮೋತಿ ಸಿಟಿಯ ಮಾಲಕ ಅಬ್ದುಲ್ ರಹೂಪ್ ಮೊದಲಾದವರು ಉಪಸ್ಥಿತರಿದ್ದರು.
ಲೋಕೇಶ್ ರೈ ನಿರೂಪಿಸಿದರು. ಸಂಸ್ಥೆಯ ಆಡಳಿತ ನಿರ್ದೇಶಕ ಮಹಮ್ಮದ್ ಆಲಿ ವಿಟ್ಲ ಸ್ವಾಗತಿಸಿದರು.





