ಬಂಟ್ವಾಳ: ವ್ಯಕ್ತಿಗೆ ಚೂರಿ ಇರಿತ: ಮುಸುಕುದಾರಿಗಳಿಂದ ಕೃತ್ಯ
ಬಂಟ್ವಾಳ: ಪಾಣೆಮಂಗಳೂರು ಅಕ್ಕರಂಗಡಿ ನಿವಾಸಿ ಹಮೀದ್ ಎಂಬುವರಿಗೆ ಚಾಕುವಿನಿಂದ ಇರಿದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಇಂದು ರಾತ್ರಿ ನಡೆದಿದೆ
ಗಾಯಗೊಂಡ ಹಮೀದ್ ಮಂಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.
ಘಟನೆ ಸ್ಥಳಕ್ಕೆ ಬಂಟ್ವಾಳ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಯುತ್ತಿದ್ದು, ಘಟನೆಯ ಕುರಿತು ಇನ್ನಷ್ಟೇ ಮಾಹಿತಿ ತಿಳಿದು ಬರಬೇಕಿದೆ.





