March 12, 2026

ಉಡುಪಿ: ಚಿಕಿತ್ಸೆಗೆಂದು ಬಂದಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ವೈದ್ಯ:

0
first-information-report

ಉಡುಪಿ: ಚಿಕಿತ್ಸೆಗೆಂದು ಬಂದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ವೈದ್ಯರೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಸಾಸ್ತಾನದ ಖಾಸಗಿ ಕ್ಲಿನಿಕ್‌ ವೈದ್ಯ ಡಾ.ರಾಘವೇಂದ್ರ ಉಪಾಧ್ಯಾಯ (60) ಬಂಧಿತ ಆರೋಪಿ.

20 ವರ್ಷದ ಯುವತಿ ಮುಂಬೈ ನಿವಾಸಿ. ಸಾಸ್ತಾನದಲ್ಲಿರುವ ತನ್ನ ಸಂಬಂಧಿಕರ ಮನೆಗೆಂದು ಬಂದಿದ್ದು, ಅನಾರೋಗ್ಯಗೊಂಡಿದ್ದರು. ಈಕೆಯನ್ನು ಚಿಕಿತ್ಸೆಗೆಂದು ಡಾ.ಉಪಾಧ್ಯಾಯ ಅವರ ಬಳಿಕ ಕರೆದುಕೊಂಡು ಹೋಗಲಾಗಿದೆ. ಈ ಸಂದರ್ಭದಲ್ಲಿ ವೈದ್ಯರು ಯುವತಿ ಜೊತೆ ಅನುಚಿತ ವರ್ತನೆ ಮಾಡಿದ್ದಾರೆ ಎಂಬ ಆರೋಪ ಬಂದಿದೆ.

ಕೂಡಲೇ ಯುವತಿ ತನ್ನ ಕುಟುಂಬದವರಿಗೆ ಈ ವಿಷಯ ತಿಳಿಸಿದ್ದಾಳೆ. ಸ್ಥಳೀಯರು ಆಕ್ರೋಶಗೊಂಡು ವೈದ್ಯರನ್ನು ತರಾಟೆಗೆ ತೆಗೆದುಕೊಂಡಿದ್ದು, ಈ ವೇಳೆ ವೈದ್ಯರು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನಂತರ ಸ್ಥಳೀಯರೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಬಂದು ವೈದ್ಯರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದ್ದಾರೆ. ನಂತರ ಕೇಸು ದಾಖಲಿಸಿ ಬ್ರಹ್ಮಾವರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಲಾಗಿದೆ.

Leave a Reply

Your email address will not be published. Required fields are marked *

error: Content is protected !!