ವಿಟ್ಲ: ವಿಟ್ಲ-ಕನ್ಯಾನ ರಸ್ತೆಯ ಕಾಂತಡ್ಕದಲ್ಲಿ ಕಾರು ಮತ್ತು ಆಟೋ ನಡುವೆ ಭೀಕರ ಅಪಘಾತವಾಗಿದ್ದು, ಆಟೋ ಸಂಪೂರ್ಣವಾಗಿ ಜಖಂಗೊಂಡಿದೆ.
ಆಟೋ ಚಾಲಕ ಒಕ್ಕೆತ್ತೂರು ನಿವಾಸಿ ಹುಸೈನ್ ಗೆ ಗಂಭೀರ ಗಾಯವಾಗಿದ್ದು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.ಆಟೋದಲ್ಲಿದ್ದ ಪ್ರಯಾಣಿಕರಿಗೂ ಗಾಯಗಳಾಗಿದ್ದು, ವಿಟ್ಲ ಸಮುದಾಯ ಆಸ್ಪತ್ರೆಗೆ ಪ್ರಯಾಣಿಕರನ್ನು ದಾಖಲಿಸಲಾಗಿದೆ.